ಕಾರ್ಕಳ: ಸೆಪ್ಟೆಂಬರ್ 23 ರಂದು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ 5,000 ಮೀಟರ್ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನಂದಿನಿ ಅವರು ಬೆಳ್ಳಿ ಪದಕ ಪಡೆದಿದ್ದಾರೆ.
ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಅವರು 5 ನೇ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಯನ್ನು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
