ಶ್ರೀನಿವಾಸ ವಿವಿ ಇನ್‌ಸ್ಟಿಟ್ಯೂಟ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸ್‌ ಪುನಶ್ಚೇತನ ಕಾರ್ಯಕ್ರಮ

Upayuktha
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಇನ್‌ಸ್ಟಿಟ್ಯೂಟ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸ್‌ 2025-26ನೇ ಸಾಲಿನ ಪುನಶ್ಚೇತನ ಕಾರ್ಯಕ್ರಮ 2025ರ ಸೆಪ್ಟೆಂಬರ್ 22ರಂದು ಶ್ರೀನಿವಾಸ ವಿಶ್ವವಿದ್ಯಾಲಯ ಮುಕ್ಕ ಆವರಣದಲ್ಲಿ ನಡೆಯಿತು.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ. ಸಿಎ. ಎ. ರಾಘವೇಂದ್ರರಾವ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಆರೋಗ್ಯವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವೆಂದು ಪ್ರಸ್ತಾಪಿಸಿದರು. ಅವರು ನಿರಂತರ ಅಧ್ಯಯನದ ಮಹತ್ವ ಹಾಗೂ ಅವಕಾಶಗಳನ್ನು ಬಳಸಿಕೊಳ್ಳುವ ಅಗತ್ಯತೆಯನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿ ಇಟ್ಟುಕೊಂಡು ಅದನ್ನು ಪರಿಶ್ರಮ ಮತ್ತು ನಿಷ್ಠೆಯಿಂದ ಸಾಧಿಸಬೇಕು ಎಂದು ಪ್ರೇರೇಪಿಸಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಹಾಗೂ ಎ. ಶಾಮರಾವ್ ಫೌಂಡೇಶನ್ ಉಪಾಧ್ಯಕ್ಷರಾದ ಡಾ. ಎ. ಶ್ರೀನಿವಾಸ ರಾವ್ ಅವರು, ವಿದ್ಯಾರ್ಥಿಗಳು ತಮ್ಮ ಕಲಿಕಾ ವಿಷಯಗಳಲ್ಲಿ ಆಳವಾದ ಜ್ಞಾನವನ್ನು ಪಡೆಯಲು ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದರ ಮೂಲಕ ಅವರು ಭವಿಷ್ಯದಲ್ಲಿ ಯಶಸ್ಸು ಸಾಧಿಸಲಿದ್ದಾರೆ ಎಂದು ಹೇಳಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಟ್ರಸ್ಟಿ ಸದಸ್ಯರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್. ರಾವ್ ಅವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ, ತಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳುವಂತೆ, ಅಧ್ಯಯನದಲ್ಲಿ ಸಮರ್ಪಿತರಾಗಿರುವಂತೆ ಹಾಗೂ ತಮ್ಮ ಜ್ಞಾನವನ್ನು ಮಾನವ ಸೇವೆಗೆ ಬಳಸುವಂತೆ ಪ್ರೇರೇಪಿಸಿದರು. ಜೀವನದ ಪ್ರತಿಯೊಂದು ಹೆಜ್ಜೆಯಲ್ಲಿಯೂ ಯಶಸ್ಸು ದೊರೆಯಲಿ ಎಂದು ಅವರು ಹಾರೈಸಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಟ್ರಸ್ಟಿ ಸದಸ್ಯರಾದ ಪ್ರೊ. ಇರ್. ಶ್ರೀಮತಿ ಮಿತ್ರಾ ಎಸ್. ರಾವ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ, ವೈದ್ಯಕೀಯ ವೃತ್ತಿ ಒಂದು ಪವಿತ್ರ ಸೇವೆ ಆಗಿದ್ದು ಅದು ಗೌರವ, ಜವಾಬ್ದಾರಿ ಮತ್ತು ಕರೂಣೆ ಬೇಡುವುದೆಂದು ತಿಳಿಸಿದರು. ಸಹಾಯಕ ಆರೋಗ್ಯ ವಿಜ್ಞಾನಗಳು ವೈದ್ಯಕೀಯ ಕ್ಷೇತ್ರದ ಅವಿಭಾಜ್ಯ ಭಾಗವಾಗಿದ್ದು, ಗುಣಪಡಿಸುವಿಕೆ ಮತ್ತು ಸಮಾಜ ಸೇವೆಯಲ್ಲಿ ಮಹತ್ತರ ಪಾತ್ರವಹಿಸುತ್ತವೆ ಎಂದು ಅವರು ಪ್ರಸ್ತಾಪಿಸಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಸತ್ಯನಾರಾಯಣ ರೆಡ್ಡಿ ಅವರು ವಿಶ್ವವಿದ್ಯಾಲಯದ ಪರಿಚಯ ನೀಡಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್ ಅವರು ಸ್ವಾಗತ ಕೋರಿದರು. ಇನ್‌ಸ್ಟಿಟ್ಯೂಟ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸ್‌ ಡೀನ್ ಪ್ರೊ. ಪಾವನ ಕೃಷ್ಣಮೂರ್ತಿ ಅವರು ವಂದಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top