ರಾಜ್ಯಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2025 ಸ್ಪರ್ಧೆ: ದಿಗಂತ್ ವಿ. ಎಸ್ ಗೆ ಬೆಳ್ಳಿ ಪದಕ

Upayuktha
0



ಪುತ್ತೂರು:  ಸೆ 22 ರಿಂದ 25ರ ವರೆಗೆ ಮೈಸೂರಿನ ಚಾಮುಂಡಿ ವಿಹಾರ  ಕ್ರೀಡಾಂಗಣದಲ್ಲಿ  ನಡೆದ ' ರಾಜ್ಯ ಮಟ್ಟದ ದಸರಾ ಕ್ರೀಡಾ ಕೂಟ ಸಿಎಂ ಕಪ್ 2025' ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ. ಎಸ್ 100ಮೀ ಫ್ರೀ ಸ್ಟೈಲ್, 100ಮೀ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ ಹಾಗೂ 4×100 ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಬೆಳ್ಳಿ  ಪದಕವನ್ನು ಪಡೆದುಕೊಂಡಿರುತ್ತಾರೆ.  ಇವರು ಕೂರ್ನಡ್ಕ ನಿವಾಸಿ ವಿಶ್ವನಾಥ್ ಮತ್ತು ವೀಣಾ ಕುಮಾರಿ ದಂಪತಿಗಳ ಪುತ್ರ. ಇವರಿಗೆ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ದಸರಾ ಕ್ರೀಡಾ ಉಪ ಸಮಿತಿ, ಮೈಸೂರು ಇದರ ಸಹಯೋಗದಲ್ಲಿ ಕ್ರೀಡಾ ಕೂಟ ಆಯೋಜನೆಗೊಂಡಿತ್ತು.


ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top