ಗಣೇಶೋತ್ಸವ ಮೆರವಣಿಗೆಗೆ ಕಲ್ಲು ತೂರಾಟ: ಓಲೈಕೆ ರಾಜಕಾರಣಕ್ಕೆ ಶಾಸಕ ಡಾ ಭರತ್ ಶೆಟ್ಟಿ ಆಕ್ರೋಶ

Chandrashekhara Kulamarva
0


ಮಂಗಳೂರು: ರಾಜ್ಯದಲ್ಲಿ ಗಣೇಶೋತ್ಸವದ ಮೆರವಣಿಗೆಯ ವೇಳೆ ಮದ್ದೂರು ಸೇರಿದಂತೆ ವಿವಿಧಡೆ ಕಲ್ಲು ತೂರಾಟ, ಚಪ್ಪಲಿ ಎಸೆತ ಹಿಂದೂಗಳ ಧಾರ್ಮಿಕ ಭಾವನೆಗೆ ತೀವ್ರ ನೋವು ಉಂಟು ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಲಭೆ ಉಂಟುಮಾಡುವವರು ಶಾಂತಿದೂತರಂತೆ ಕಂಡು ಬರುತ್ತಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.


ಗಲಾಟೆ ಆಗಬಾರದು ಎಂದು ಹಿಂದೂಗಳ ಹಬ್ಬಗಳಿಗೆ ಮೆರವಣಿಗೆ ಧಾರ್ಮಿಕ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆಯನ್ನ ಬಳಸಿಕೊಂಡು ಅಂಕುಶ ಹಾಕಿದ್ದಾರೆ. ಕಾನೂನು ಪಾಲಿಸಿಕೊಂಡು ಹಬ್ಬ ಆಚರಿಸಿದರೆ ಮುಖ್ಯಮಂತ್ರಿಗಳ ಶಾಂತಿದೂತರು ಕಾನೂನು ಕೈಗೆತ್ತಿಕೊಂಡು ಗಲಭೆ ಎಬ್ಬಿಸಿದ್ದಾರೆ.


ಕರ್ನಾಟಕ ಕಾಂಗ್ರೆಸ್ ಸರ್ಕಾರ ಪೊಲೀಸರ ಕೈಕಟ್ಟಿ ಹಾಕಿದೆ. ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಸರ್ಕಾರದ ಈ ಪಕ್ಷಪಾತ ಹಾಗೂ ಮೃದುಧೋರಣೆ ರಾಜ್ಯದಲ್ಲಿ ಅರಾಜಕತೆ, ಜನತೆಯೇ ಕಾನೂನು ಕೈಗೆತ್ತಿಕೊಳ್ಳಲು ಕಾರಣವಾಗುತ್ತಿದೆ.


ಮತಾಂಧ ದುಷ್ಕರ್ಮಿಗಳ ಮೇಲೆ ವೋಟ್ ಬ್ಯಾಂಕ್, ಅಲ್ಪಸಂಖ್ಯಾತರ ಓಲೈಕೆಯಿಂದ ಕಾನೂನು ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಜಿಹಾದಿಗಳ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಮಹಿಳೆಯರು ಮಕ್ಕಳು ಎನ್ನದೆ ಶಾಂತಿಯುತವಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿದ್ದಾರೆ. ಹಿಂದುಗಳ ತಾಳ್ಮೆಗೂ ಮಿತಿ ಇದೆ. ಸರಕಾರ ಹಾಗೂ ಪೊಲೀಸ್ ವ್ಯವಸ್ಥೆ ನಮ್ಮ ರಕ್ಷಣೆಗೆ ಕ್ರಮ ಕೈಗೊಳ್ಳದಿದ್ದರೆ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳುವುದು ಗೊತ್ತಿದೆ ಎಂದು ಡಾ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top