ಅಡ್ಯನಡ್ಕ: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು, ಹಾಗೂ ಜನತಾ ಪದವಿ ಪೂರ್ವ ಕಾಲೇಜು ಅಡ್ಯನಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಖೋಖೋ ಪಂದ್ಯಾಟ ಅಡ್ಯನಡ್ಕದ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ (ಸೆ.8) ನಡೆಯಿತು.
ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ ಬಾಯಾರು ಇವರು ಶುಭನುಡಿಗಳ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಪದವಿಪೂರ್ವ ವಿಭಾಗದ ಕ್ರೀಡಾ ಸಂಯೋಜಕ ತುಂಬೆ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಾಯಿ ರಾಮ್ ಶುಭ ಹಾರೈಸಿದರು. ಜನತಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ವಸಂತ ಗೌಡ ಇವರು ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್ ಆರ್ ಎಸ್ ರವರು ವಂದನಾರ್ಪಣೆಗೈದರು.
ಫಲಿತಾಂಶ: ಬಾಲಕರ ವಿಭಾಗದಲ್ಲಿ ವಿಠಲ ಪದವಿ ಪೂರ್ವ ಕಾಲೇಜು, ವಿಟ್ಲ ಪ್ರಥಮ ಸ್ಥಾನ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ವಾಮದಪದವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ವಾಮದಪದವು ಪ್ರಥಮ ಸ್ಥಾನ ಹಾಗೂ ವಿಠಲ ಪದವಿ ಪೂರ್ವ ಕಾಲೇಜು, ವಿಟ್ಲ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ