ಚೇತನಾ ಬಾಲವಿಕಾಸ ಶಾಲೆಯಲ್ಲಿ ಶಿಕ್ಷಕ ದಿನಾಚರಣೆ

Upayuktha
0


ಮಂಗಳೂರು: ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕ ಹಾಗೂ ಶಿಕ್ಷಕೇತರ ನಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಚೇತನಾ ಬಾಲವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲೆ ಇವರ ಜಂಟಿ ಆಶ್ರಯದಲ್ಲಿ “ಶಿಕ್ಷಕರ ದಿನಾಚರಣೆ” ದಿನಾಂಕ 13 ಸೆಪ್ಟೆಂಬರ್ 2025ರ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಸೇವಾ ಭಾರತಿ (ರಿ) ಇದರ ಅಂಗ ಸಂಸ್ಥೆ ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಠಾರದಲ್ಲಿ ಜರಗಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾ ಅಧ್ಯಕ್ಷೆಯವರಾದ ಶ್ರಿಮತಿ ರೇಷ್ಮಾ ಮರಿಯ ಮಾರ್ಟಿಸ್ ಅವರು ವಹಿಸಲಿದ್ದು, ಅಶೋಕನಗರ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಸಾವಿತ್ರಿ ಎಸ್ ರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. 


ಮುಖ್ಯ ಅತಿಥಿಗಳಾಗಿ ಜಿಲ್ಲಾ ವಿಕಲ ಚೇತನ ಕಲ್ಯಾಣಾಧಿಕಾರಿ ಮನಿಷ್ ನಾಯಕ್ ಮತ್ತು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ವಸಂತಕುಮಾರ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ. 


ಗೌರವಾನ್ವಿತ ಅತಿಥಿಗಳಾಗಿ ಸೇವಾ ಭಾರತಿ ಸಂಸ್ಥೆಯ ಗೌರವ ಕಾರ್ಯದರ್ಶಿ ಹೆಚ್.ನಾಗರಾಜ್ ಭಟ್ ಮತ್ತು ಸಂಸ್ಥೆಯ ವಿಶ್ವಸ್ಥರು ಹಾಗೂ ಕೋಶಾಧಿಕಾರಿದ ಪಿ. ವಿನೋದ್ ಶೆಣೈ ಅವರು ಪಾಲ್ಗೊಳ್ಳಲಿದ್ದಾರೆ.


ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 13 ವಿಶೇಷ ಶಾಲೆಗಳು ಭಾಗವಹಿಸಲಿದ್ದು ಪ್ರತಿಯೊಂದು ಶಾಲೆಯ ಹಿರಿಯ ವಿಶೇಷ ಶಿಕ್ಷಕರನ್ನು ಸನ್ಮಾನಿಸಲಾಗುವುದು ಹಾಗೂ ಜಿಲ್ಲಾ ವಿಕಲಚೇತನ ಕಚೇರಿ ಸಿಬ್ಬಂದಿ ಕುಮಾರಿ ನಿರ್ಮಲ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪೆಷಲ್ ಒಲಿಂಪಿಕ್ಸ್ ಪಂದ್ಯಾಟಕ್ಕೆ ಕೋಚ್ ಆಗಿ ತೆರಳಿದ್ದ ಲಯನ್ಸ್ ವಿಶೇಷ ಶಾಲೆ ಸುರತ್ಕಲ್‌ನ ಶಿಕ್ಷಕಿ ಕುಮಾರಿ ಸೌಮ್ಯ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top