ತೆಂಕನಿಡಿಯೂರು: ವಿಶ್ವ ಸಾಕ್ಷರತಾ ದಿನಾಚರಣೆ

Chandrashekhara Kulamarva
0


ತೆಂಕನಿಡಿಯೂರು: ಇಂದಿನ ಡಿಜಿಟಲ್‌ ಯುಗದಲ್ಲಿ ಕಲಿಕೆಗೆ ಹಲವಾರು ಅವಕಾಶಗಳಿವೆ. ಆದರೆ ತಂತ್ರಜ್ಞಾನದ ದುರ್ಬಳಕೆ ಕೂಡ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಸೂಕ್ತ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ಗಾಂವಕರ್‌ ಅಭಿಪ್ರಾಯಪಟ್ಟರು. 


ಅವರು ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ಎಲ್ಲಾ ಪಿ.ಜಿ ವಿಭಾಗಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ʼವಿಶ್ವ ಸಾಕ್ಷರತಾ ದಿನಾಚರಣೆʼ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಆಂಗ್ಲಭಾಷಾ ವಿಭಾಗ ಮುಖ್ಯಸ್ಥ ಹಾಗೂ ಶೈಕ್ಷಣಿಕ ಸಲಹೆಗಾರ ಡಾ ಶ್ರೀಧರ ಭಟ್‌ ಅವರು ಕಲಿಕೆಯಲ್ಲಿ ಔನತ್ಯ ಸಾಧಿಸಲು ತಂತ್ರಜ್ಞಾನದ ಸದ್ಭಳಕೆ ಅನಿವಾರ್ಯ ಎಂದರು. 


ಐಕ್ಯೂಎಸಿ ಸಂಚಾಲಕ ಡಾ ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸಂದೇಶ್‌, ರಾಜಕುಮಾರ್ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವಿವಿಧ ಸ್ನಾತಕೋತ್ತರ ವಿಭಾಗಗದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top