ತೆಂಕನಿಡಿಯೂರು: ತುಳುನಾಡಿನ ಅಳಿಯ ಕಟ್ಟು ಪರಂಪರೆಯೊಳಗೆ ಬಾಳಿದ ವೀರ ವನಿತೆ ಉಳ್ಳಾಲದ ರಾಣಿ ಅಬ್ಬಕ್ಕಳ ಯಶೋಗಾಥೆ ನಮಗೆಲ್ಲರಿಗೂ ಆದರಣೀಯವೂ ಅನುಕರಣೀಯವೂ ಆಗಿದೆ. ತುಳುನಾಡಿನ ಕರಾವಳಿಯ ರಕ್ಷಣಾ ವ್ಯವಸ್ಥೆಯನ್ನು ಸಂವರ್ಧಿಸುವಲ್ಲಿ ರಾಣಿ ಅಬ್ಬಕ್ಕಳ ಪಾತ್ರ ಮಹತ್ತರವಾದುದು ಎಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ.ಎ.ಸುವರ್ಣ ಅಭಿಪ್ರಾಯಪಟ್ಟರು.
ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ) ಮಂಗಳೂರು ವಿಭಾಗ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಕನ್ನಡ ವಿಭಾಗ ಹಾಗೂ ಐ.ಕ್ಯೂ.ಎ.ಸಿ ಆಶ್ರಯದಲ್ಲಿ ರಾಣಿ ಅಬ್ಬಕ್ಕ 500 ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಎಸಳು-77 ರ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತಾನಾಡಿದರು.
ರಾಣಿ ಅಬ್ಬಕ್ಕಳ ಜೀವನ ಮತ್ತು ಸಾಧನೆಯ ಕುರಿತು ಗುಜರಾತ್ ಕೇಂದ್ರಿಯ ವಿಶ್ವವಿದ್ಯಾನಿಲಯ ಸಂಶೋಧನಾ ಮಾರ್ಗದರ್ಶಕರಾದ ಡಾ. ಮಾಲತಿ ಪೈ ಇವರು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ) ಉಡುಪಿ ಘಟಕದ ಪ್ರತಿನಿಧಿ ಡಾ.ಭೈರವಿ ಪಾಂಡ್ಯ, ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ದಡಾ. ರೋಶನ್ ಕುಮಾರ್ ಜಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ರತ್ನಮಾಲಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಸುಶ್ಮಿತಾ ಮತ್ತು ಬಳಗದವರು ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕರಾದ ಅರ್ಚನಾ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


