ಸುರತ್ಕಲ್: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹೆತ್ತವರ ಪಾತ್ರದಷ್ಟೇ ಮಹತ್ವದ ಪಾತ್ರವನ್ನು ಶಿಕ್ಷಕರು ಹೊಂದಿದ್ದಾರೆ. ಶ್ರದ್ಧೆ ಮತ್ತು ಶಿಸ್ತಿನಿಂದ ಕಾರ್ಯ ನಿರ್ವಹಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಣವು ಶಿಕ್ಷೆಯಲ್ಲ ಅದು ಮುಂದಿನ ಸಮೃದ್ಧ ಜೀವನದ ಭದ್ರ ಬುನಾದಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವುದು ಶಿಕ್ಷಕರ ಕರ್ತವ್ಯ ಎಂದು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್ ಇಲ್ಲಿನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಭಟ್ ಎಸ್.ಜಿ. ನುಡಿದರು.
ಅವರು ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್ (ರಿ) ಮತ್ತು ರಕ್ಷಕ-ಶಿಕ್ಷಕ ಸಂಘಗಳು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಮಾತನಾಡಿ ಭಾರತೀಯ ಪರಂಪರೆಯಲ್ಲಿ ಗುರು ಶಿಷ್ಯರ ಸಂಬಂಧವು ಶ್ರೇಷ್ಠವಾಗಿದ್ದು ಶಿಕ್ಷಕರು ವಿದ್ಯಾರ್ಥಿಗಳಿಗೆ ಭೌದ್ಧಿಕ ಜ್ಞಾನದೊಂದಿಗೆ ಜೀವನ ಮೌಲ್ಯಗಳನ್ನು ಮನದಟ್ಟು ಮಾಡಿಕೊಡುವುದು ಅಗತ್ಯವಾಗಿದೆ. ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್ ಮತ್ತು ರಕ್ಷಕ- ಶಿಕ್ಷಕ ಸಂಘವು ಪ್ರತೀ ವರ್ಷ ಶಿಕ್ಷಕರ ದಿನಚಾರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.
ಶ್ರೇಷ್ಠ ಶಿಕ್ಷಕ ಡಾ. ಎಸ್. ರಾಧಾಕೃಷ್ಣರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿ ಎಲ್ಲಾ ಉಪನ್ಯಾಸಕರನ್ನು ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಅಧ್ಯಕ್ಷೆ ಡಾ. ಸಾಯಿಗೀತಾ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ವಂದಿಸಿದರು. ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಅಭಿನಂದಿತರ ಪಟ್ಟಿಯನ್ನು ವಾಚಿಸಿದರು. ಉಪಪ್ರಾಚಾರ್ಯ ಪ್ರೊ. ನೀಲಪ್ಪ ವಿ., ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷೆ ಪ್ರಿಯದರ್ಶಿನಿ, ಕಾರ್ಯದರ್ಶಿ ಶೈಲಜಾ ಪ್ರವೀಣ್, ಯೋಗೀಶ್ ಕಾಂಚನ್, ಚಂದ್ರ ಶೇಖರ್, ಮಾಜಿ ಅಧ್ಯಕ್ಷ ಗಂಗಾಧರ ಪೂಜಾರಿ, ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಉಪಾಧ್ಯಕ್ಷ ಯೋಗೀಶ್ ಕುಳಾಯಿ ಜೊತೆ ಕಾರ್ಯದರ್ಶಿ ಸತೀಶ್ ಸುರತ್ಕಲ್, ಕಾರ್ಯಾಕಾರಿ ಸಮಿತಿಯ ಸದಸ್ಯರಾದ ರಾಘವೆಂದ್ರ ಐ., ಗಂಗಾಧರ್ ಕೆ., ಶಶಿಕಲಾ, ಲೋಕಯ್ಯ ಶೆಟ್ಟಿ, ಗಂಗಾಧರ್, ಸುಂದರ್ ಸಾಲ್ಯಾನ್, ವಿನೋದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ರಕ್ಷಕ-ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿ ಡಾ. ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ