ಹಾಸನ: ವಿದ್ಯಾರ್ಥಿಗಳ ವ್ಯಕ್ತಿತ್ವ ನಿರೂಪಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ನಡೆ ನುಡಿಯನ್ನು ಕಲಿಸುವ ಮೂಲಕ ಮಾದರಿಯಾಗಿರಬೇಕು ಎಂದು ಗಂಧದ ಕೋಠಿ ಆವರಣದಲ್ಲಿರುವ ಜಿ.ಜಿ.ಜೆ.ಸಿ. ಪ್ರಧಾನ ಶಾಲೆಯ ಉಪಪ್ರಾಂಶುಪಾಲ ಮಂಜುನಾಥ್ ಹೇಳಿದರು.
ನಗರದ ಆರ್. ಸಿ.ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರಧಾನ) ಹಾಗೂ ಪ್ರೌಢಶಾಲಾ ವಿಭಾಗ ಇಲ್ಲಿ ಆಯೋಜನೆಗೊಂಡಿದ್ದ ಡಾ. ಎಸ್. ರಾಧಾ ಕೃಷ್ಣನ್ ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ನಾವಿಂದು ಆಧುನಿಕ ಕಾಲದಲ್ಲಿ ಬದುಕುತ್ತಿದ್ದೇವೆ. ಈ ವೈಜ್ಞಾನಿಕ ಯುಗಕ್ಕೆ ವಿದ್ಯಾರ್ಥಿಗಳನ್ನು ಹೊಂದಾಣಿಕೆ ಮಾಡುವುದು ಎಲ್ಲಾ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕ ಚಿದಾನಂದ ಕೆ.ಎನ್.ರವರನ್ನು ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾತನಾಡುತ್ತಾ ಚಿದಾನಂದರವರಿಗೆ "ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ"ಯು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿರುವುದು ನಮ್ಮ ಶಾಲೆಯ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸಿದೆ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಅವರ ಶಿಸ್ತುಬದ್ಧ ಕೆಲಸ ಕಾರ್ಯಗಳನ್ನು ಶ್ಲಾಘಿಸಿ ಇವರಿಗೆ ನಮ್ಮ ಶಾಲೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ. ವಿದ್ಯಾರ್ಥಿಗಳ ಮಾರ್ಗದರ್ಶಿ ಶಿಕ್ಷಕರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.
ಶಾಲೆಯ ಸನ್ಮಾನಿತ ಸಹ ಶಿಕ್ಷಕರಾದ ಚಿದಾನಂದ ಅವರು ಮಾತನಾಡುತ್ತಾ ಶಿಕ್ಷಕರ ದಿನಾಚರಣೆ ಶಿಕ್ಷಕರಿಗಾಗಿಯೇ ಇರುವ ದಿನಾಚರಣೆಯಾಗಿದೆ. ಇಂತಹ ದಿನದಂದು ವಿದ್ಯಾರ್ಥಿಗಳಿಗೆ ಪಾಠ ಕಲಿಸಿ ಬದುಕನ್ನು ರೂಪಿಸುವ ಎಲ್ಲ ಶಿಕ್ಷಕರನ್ನು ಗೌರವಿಸಿ ಅಭಿನಂದಿಸಿ ಸನ್ಮಾನಿಸುವುದು ವಿದ್ಯಾರ್ಥಿಗಳಿಗೆ ಒಂದು ಪುಣ್ಯದ ಕೆಲಸವಾಗಿದೆ. ಶಿಕ್ಷಕರಿಂದ ಒಳ್ಳೆಯ ನಡೆನುಡಿಗಳನ್ನು ಕಲಿಯುವ ಮೂಲಕ ಮಕ್ಕಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು. ಮತ್ತೋರ್ವ ಸಹಶಿಕ್ಷಕರಾದ ರುದ್ರೇಶ್ ರವರು ಮಾತನಾಡಿ, ಭಾರತ ವಿಶ್ವಗುರುವಾಗುವತ್ತ ಹೆಜ್ಜೆ ಇಟ್ಟಿದೆ. ಇದಕ್ಕೆ ಇಂದಿನ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಮುಂದೆ ಬರಬೇಕು. ಶಿಕ್ಷಕರಿಂದ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಹೆಚ್.ಪಿ. ಮಂಜಳ, ಎ.ವಿ. ಗೀತಾರಾಣಿ, ಎಂ.ಆರ್. ರಂಗಾಮಣಿ, ಎಸ್.ಕೆ. ಪೂರ್ಣಿಮಾ, ಮಧು. ಪಿ., ತೈಬಾ ಕೌಸರ್, ಸಂಗೀತ ಶಿಕ್ಷಕರಾದ ಸತ್ಯನಾರಾಯಣ ಮುರಳಿ, ಹಾಗೂ ಶಾಲಾ ಸಿಬ್ಬಂದಿ ವರ್ಗ ಮತ್ತು ಬಿ.ಇಡಿ. ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು. ಕು. ಪೂರ್ವಿಕ ಕಾರ್ಯಕ್ರಮ ನಿರೂಪಿದರು ಮತ್ತು ವಿದ್ಯಾರ್ಥಿಗಳ ತಂಡವು ಪ್ರಾರ್ಥಿಸಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


