ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಶ್ರೀ ಶಾರದಾ ಕಾಲೇಜು, ಬಸ್ರೂರು ಇವರ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -9 ಕಾರ್ಯಕ್ರಮವು ಸೆಪ್ಟಂಬರ್ 23 ರಂದು ಮಧ್ಯಾಹ್ನ 2.00 ಕ್ಕೆ ಗಂಟೆಗೆ ಕಾಲೇಜಿನ ಸಭಾಂಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯೆ ಅನುಪಮಾ ಎಸ್ ಶೆಟ್ಟಿ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲೆ ಡಾ.ಚಂದ್ರಾವತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಆಶಯ ನುಡಿಗಳನ್ನಾಡಲಿದ್ದಾರೆ.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರವಿರಾಜ್ ಶೆಟ್ಟಿ ಭಾಗವಹಿಸಿ “ಕಾರಂತ ಯುಗಾಂತ ಅವರ ನೆನಪು ಜೀವಂತ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


