ಉಡುಪಿ: “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತರ ವಿವರ

Upayuktha
0


ಉಡುಪಿ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ವಿವರ ಹೀಗಿದೆ.


ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಕುಂದಾಪುರ ತಾಲೂಕು ಮರೂರು ಸಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸರಸ್ವತಿ, ಉಡುಪಿ ತಾಲೂಕು ಬೊಮ್ಮಾರಬೆಟ್ಟು ಗುಡ್ಡೆಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಸುಂಧರ, ಕಾರ್ಕಳ ತಾಲುಕು ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹರೀಶ್ ಪೂಜಾರಿ ಎಸ್, ಬೈಂದೂರು ವಲಯ ಕಿಸ್ಮತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಮಂಗಲಾ ಗಾಣಿಗ ಹಾಗೂ ಬ್ರಹ್ಮಾವರ ತಾಲೂಕು ಮೂಡುಕೆರೆ-ಅಚ್ಲಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಿಜಯಾ ಎ. ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಕುಂದಾಪುರ ತಾಲೂಕು ಹೆಸ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶೇಖರ ಕುಮಾರ, ಬ್ರಹ್ಮಾವರ ತಾಲೂಕು ಹಂಗಾರಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ, ಉಡುಪಿ ತಾಲೂಕು ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಮಣಿ, ಬೈಂದೂರು ವಲಯ ಕಂಚಿಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಹಾಗೂ ಕಾರ್ಕಳ ತಾಲೂಕು ಕೂಡಬೆಟ್ಟು-ಮಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಪ್ರಭಾವತಿ.


ಪ್ರೌಢಶಾಲಾ ವಿಭಾಗ: ಕಾರ್ಕಳ ತಾಲೂಕು ಬಜಗೋಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಶಶಿಶಂಕರ್ ಹೆಚ್.ಎಂ, ಉಡುಪಿ ತಾಲೂಕು ಇನ್ನಂಜೆ ಎಸ್.ವಿ.ಹೆಚ್ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಚಿತ್ರಕಲಾ ಶಿಕ್ಷಕ ಎ ನಟರಾಜ ಉಪಾಧ್ಯ, ಬ್ರಹ್ಮಾವರ ತಾಲೂಕು ಕರ್ನಾಟಕ ಪಬ್ಲಿಕ್ ಸ್ಕೂಲ್ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ಕೆ, ಕುಂದಾಪುರ ತಾಲೂಕು ಕಂಡ್ಲೂರು ರಾಮನ್ಸ್ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸಂತೋಷ ಹಾಗೂ ಬೈಂದೂರು ವಲಯ ಹೆಮ್ಮಾಡಿ ಜನತಾ ಪ್ರೌಢಶಾಲೆಯ ಜಗದೀಶ ಶೆಟ್ಟಿ ಅವರುಗಳಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top