ಮಹಾತ್ಮ ಗಾಂಧಿ ಮೆಮೊರಿಯಲ್ ಸಂಧ್ಯಾ ಕಾಲೇಜಿನಲ್ಲಿ “Awaken to Ascend” ಪ್ರೇರಣಾತ್ಮಕ ಕಾರ್ಯಕ್ರಮ

Upayuktha
0



ಉಡುಪಿ: ಮಹಾತ್ಮ ಗಾಂಧಿ ಮೆಮೊರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ 2025ರ ಸೆಪ್ಟೆಂಬರ್ 17ರಂದು“Awaken to Ascend” ಎಂಬ ಪ್ರೇರಣಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. 


ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರೊ. (ಮೇಜರ್) ರಾಧಾಕೃಷ್ಣ  ಎಂ ನಾಯಕತ್ವ  ಮತ್ತು  ಮಾನವ  ಸಂಪನ್ಮೂಲ  ಅಭಿವೃದ್ಧಿ ವಿಭಾಗದ  ಖ್ಯಾತ ತರಬೇತುದಾರರು  ಪಾಲ್ಗೊಂಡು  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. “Rise with grit, refine with grace, radiate with glory” ಎಂಬ ಧ್ಯೇಯವಾಕ್ಯದಡಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ  ದೃಢತೆ, ಸೌಮ್ಯತೆ ಹಾಗೂ ಪ್ರಾಮಾಣಿಕತೆ  ಮೂಲಕ ಯಶಸ್ಸನ್ನು ಹೇಗೆ ಸಾಧಿಸಬಹುದು ಎಂಬ ಕುರಿತು ತಿಳಿಸಿದರು.


ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಬೆಳವಣಿಗೆಯಲ್ಲದೆ, ವ್ಯಕ್ತಿತ್ವ ವಿಕಾಸ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಬೆಳೆಸಿಕೊಳ್ಳಬೇಕು ಎಂದು ಮನದಟ್ಟುಗೊಳಿಸಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರಮ, ಶಿಸ್ತು ಮತ್ತು ಮೌಲ್ಯಾಧಾರಿತ ಬದುಕು ಮಾತ್ರ ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಲ್ಲದು ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಸಿ.ಎ ವಿಕಾಸ್ ಶೆಟ್ಟಿ ನಿರೂಪಿಸಿದರು..



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top