ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆ ಗುರುವಾರ ಧರ್ಮಸ್ಥಳದಲ್ಲಿ ನಡೆಯಿತು.
ಉಜಿರೆ: ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಗುರುವಾರ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಹೇಮವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು. ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


