ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ: ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ವಿಚಾರ ಸಂಕಿರಣ ಉದ್ಘಾಟಿಸಿದರು.


ಉಜಿರೆ: ತತ್ವಪದಗಳಲ್ಲಿ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾದ, ವಿಶ್ವಮಾನವ ಪ್ರಜ್ಞೆ ಮೂಡಿಸುವ, ಸಮಾಜಸುಧಾರಣೆಯ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳ ಸತ್ವಪೂರ್ಣ ಸಂದೇಶವಿದ್ದು ಅದರ ಅನುಷ್ಠಾನದಿಂದ ಎಲ್ಲೆಡೆ ಶಾಂತಿ, ನೆಮ್ಮದಿ ನೆಲೆಸುತ್ತದೆ. ರಾಜ್ಯದ ವಿವಿಧ ಕಡೆಗಳಲ್ಲಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿಕ್ಷೇಪಗಳ ಅಧ್ಯಯನ ಮತ್ತು ಸಂಶೋಧನೆ ಮಾಡಬೇಕು ಎಂದು ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು.


ಅವರು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ “ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ” ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.


ಯುವಜನತೆಗೆ ಹಾಗೂ ಜನಸಾಮಾನ್ಯರಿಗೆ ತತ್ವಪದಗಳ ಸಾರ್ವಕಾಲಿಕ ಮೌಲ್ಯ ಹೊಂದಿರುವ ಸಂದೇಶಗಳನ್ನು ತಿಳಿಸಬೇಕು ಎಂದು ಅವರು ಸಲಹೆ ನೀಡಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್ ಮಾತನಾಡಿ ತತ್ವಪದಗಳ ಸಾರವನ್ನು ತಿಳಿಯುವುದರಿಂದ ಸಮಾಜದಲ್ಲಿರುವ ಅಸಮಾನತೆ, ಅಂಕುಡೊಂಕು ಹಾಗೂ ಬೇಧಭಾವ ನಿವಾರಣೆಯಾಗಿ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸಂಕುಚಿತ ಮನೋಭಾವ ದೂರವಾಗುತ್ತದೆ ಎಂದು ಹೇಳಿದರು.


ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್. ಕಾಕತ್ಕರ್ ಬಿ.ಎ. ಅಂತಿಮ ಪದವಿ ತರಗತಿಯ ವಿದ್ಯಾರ್ಥಿಗಳು ರಚಿಸಿದ “ಭಿತ್ತಿಪತ್ರಿಕೆ” ಯನ್ನು ಅನಾವರಣಗೊಳಿಸಿದರು.


ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಹಿರಿಯ ಅಧಿಕಾರಿ ಸತ್ಯನಾರಾಯಣ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ .ಬಿ.ಎ. ಕುಮಾರ ಹೆಗ್ಡೆ ಉಪಸ್ಥಿತರಿದ್ದರು.


ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿಚಾರಸಂಕಿರಣದ ಸಂಚಾಲಕ ಪ್ರೊ. ನಾಗಣ್ಣ ಡಿ.ಎ. ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕಿ ಭವ್ಯಶ್ರೀ ಬಳ್ಳಾಲ್ ಕಾರ್ಯಕ್ರಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top