ತತ್ವಪದಗಳು: ಸಾಂಸ್ಕೃತಿಕ ಅನುಸಂಧಾನ- ರಾಷ್ಟ್ರೀಯ ವಿಚಾರಸಂಕಿರಣ

Upayuktha
0



ಉಜಿರೆ: ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದಲ್ಲಿ ಸೆ.19 ಮತ್ತು 20ರಂದು (ಶುಕ್ರವಾರ, ಶನಿವಾರ) “ತತ್ವಪದಗಳು - ಸಾಂಸ್ಕೃತಿಕ ಅನುಸಂಧಾನ” ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣ ಆಯೋಜಿಸಲಾಗಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಕೆ.ಎನ್. ಮತ್ತು ಸಹಾಯಕ ಪ್ರಾಧ್ಯಾಪಕ ನಾಗಣ್ಣ ಡಿ.ಎ. ತಿಳಿಸಿದ್ದಾರೆ.


ಸೆ. 19 ರಂದು ಶುಕ್ರವಾರ ಪೂರ್ವಾಹ್ನ ಗಂಟೆ 10.30ಕ್ಕೆ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ. ಚಿಕ್ಕಣ್ಣ ವಿಚಾರಸಂಕಿರಣವನ್ನು  ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸುವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಶುಭಾಶಂಸನೆ ಮಾಡುವರು.


ಬೆಂಗಳೂರಿನ ಡಾ. ಎಸ್.ಆರ್. ಲಲಿತಾಂಬ, ಗದಗದ ರೇಖಾ ನೀರಲಗಿ, ಕೊಪ್ಪಳದ ಪವನಕುಮಾರ್, ಕೊಪ್ಪಳದ ಜಾಜಿ ದೇವೇಂದ್ರಪ್ಪ, ರಾಯಚೂರಿನ ಎರಿಯಪ್ಪ ಬೆಳಗುರ್ಕಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು. ಮೈಸೂರಿನ ಕುಮಾರ್ ಮತ್ತು ಬಳಗದವರು ಹಾಗೂ ಪಾವಗಡದ ಸಣ್ಣೀರಪ್ಪ ಮತ್ತು ಬಳಗದವರು ತತ್ವಪದಗಳನ್ನು ಹಾಡುವರು.



ಧರ್ಮಸ್ಥಳದಿಂದ 1,074 ಶಾಲೆಗಳಿಗೆ ಗೌರವ ಶಿಕ್ಷಕರ ನಿಯೋಜನೆ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ 1,074 ಶಾಲೆಗಳಿಗೆ ಗೌರವ ಶಿಕ್ಷಕರ ನಿಯೋಜನೆ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ಅನಿಲ್ ಕುಮಾರ್ ತಿಳಿಸಿದ್ದಾರೆ.


ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಆಟದ ಮೈದಾನ, ಕುಡಿಯುವ ನೀರು, ಶೌಚಾಲಯ, ಪೀಠೋಪಕರಣಗಳ ಪೂರೈಕೆಗಾಗಿ ಕಳೆದ ಮೂವತ್ತು ವರ್ಷಗಳಲ್ಲಿ 73.07 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top