ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು.
ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳ:ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.
ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು. ಹಾಸನದ ಮಂಗಳಾ, ರೂಪಾ, ಮಂಡ್ಯದ ಮಧುಕರ್ ತರಬೇತಿ ಬಗ್ಯೆ ಅನುಭವ, ಅನಿಸಿಕೆ ವ್ಯಕ್ತಪಡಿಸಿದರು.
ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಉಪನ್ಯಾಸಕ ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
