ಕಾಂತಾವರ: ಕೌಟುಂಬಿಕವಾಗಿ ಮಾತ್ರವಲ್ಲ ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಪರಿಕಲ್ಪನೆಯಲ್ಲಿಯೂ ಮಿಳಿತಗೊಂಡಿರುವ ಭಾವನಾತ್ಮಕ ಸಂಬಂಧಗಳ ನವಿರಾದ ವಿವರಣೆಗಳನ್ನು ರಾಮಾಯಣದಲ್ಲಿ ಕಾಣಬಹುದಾಗಿದೆ. ರಾಜನಾದವನು ಪಾಲಿಸಬೇಕಾದ ರಾಜ ಧರ್ಮದ ಬಗ್ಗೆಯೂ ರಾಮನು ಭರತನಿಗೆ ಬೋಧಿಸುತ್ತಾನೆ. ರಾಜಧರ್ಮದ ಈ ವಿವರಣೆಗಳು ಇಂದಿನ ರಾಜಕಾರಣಿಗಳಿಗೂ ಅನುಕರಣೆಗೆ ಅತ್ಯಂತ ಯೋಗ್ಯವಾದುದಾಗಿದೆ ಎಂಬುದಾಗಿ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು.
ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ 2025ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಅಷ್ಟಮ ಸೋಪಾನ ‘ಶ್ರೀರಾಮ ಸಮಾಗಮ’ ಎಂಬ ವಿಷಯದ ಕುರಿತು ಆಗಸ್ಟ್ 30ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.
ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ, ಅ.ಭಾ.ಸಾ.ಪ.ದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ, ಅಧ್ಯಕ್ಷರಾದ ಮಿತ್ರಪ್ರಭಾ ಹೆಗ್ಡೆ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು| ಶಾರ್ವರಿ ಪ್ರಾರ್ಥಿಸಿದರು. ಡಾ. ಸುಮತಿ ಪಿ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಸುಲೋಚನಾ ಬಿ.ವಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

%20karyakramada%20photo.jpg)
