ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಡಾ| ಸುದೀಪ್ ಡಿ. ಘಾಟೆ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೀನಿಯರ್ ಡೇಟಾ ಸೈಂಟಿಸ್ಟ್, ಹೆಲ್ತ್ ಕೇರ್ ಅಂಡ್ ಲೈಫ್ ಸೈನ್ಸ್ , ಇ.ಪಿ.ಎ.ಎಂ ಸಿಸ್ಟಮ್ಸ್ ಇವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ವಹಿಸಿಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಡಾ| ಸುದೀಪ್ ಡಿ. ಘಾಟೆ ಅವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಎರಡು ಅವಧಿಗಳಲ್ಲಿ ವೃತ್ತಿ ಮಾರ್ಗದರ್ಶನ ಕುರಿತಾದ ಕಾರ್ಯಾಗಾರ ನಡೆಸಿಕೊಟ್ಟರು.
ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದಲ್ಲಿ ಇರುವ ಹತ್ತು-ಹಲವು ಅವಕಾಶಗಳ ಕುರಿತಾದ ಸವಿವರವಾದ ಮಾಹಿತಿಯನ್ನು ನೀಡಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಮಾಧವಿ ಪಟೇಲ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
