ಪುತ್ತೂರು: ಪುತ್ತೂರಿನ ಬಾಲವನ ಈಜುಕೊಳದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಮಹಿಳೆಯರ ವಿಭಾಗದಲ್ಲಿ ಸಮಗ್ರ ತೃತೀಯ ತಂಡ ಪ್ರಶಸ್ತಿ ಲಭಿಸಿದೆ. ತೃತೀಯ ಬಿ.ಎಸ್ಸಿ ಯತನ್ವಿಬಿ.ಕೆ ಮೂರು ಕಂಚಿನ ಪದಕ (50ಮೀ,100ಮೀ,200 ಮೀ ಬ್ಯಾಕ್ ಸ್ಟ್ರೋಕ್) ಹಾಗೂ ತೃತೀಯ ಬಿಸಿಎ ಯ ಪ್ರೀತಿಕಾ ವಿ.ಜೆ ಎರಡು ಕಂಚಿನ ಪದಕ(50 ಮೀ, 100 ಮೀ ಬಟರ್ ಫ್ಲೈ ಸ್ಟ್ರೋಕ್) ಗಳಿಸಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರವಿಶಂಕರ್ ಎಸ್ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


