ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಓಝೋನ್ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಡಾ. ಮನೋಜ್ ಗೋದ್ಬೋಳೆ, ಅಸೋಸಿಯೇಟ್ ಪ್ರೊಫೆಸರ್, ಜೈವಿಕ ತಂತ್ರಜ್ಞಾನ ವಿಭಾಗ ಎಸ್ .ಡಿ .ಎಂ . ಪಿ .ಜಿ.ಕಾಲೇಜು ಉಜಿರೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಓಝೋನ್ ದಿನದ ಮಹತ್ವವನ್ನು ವಿವರಿಸಿದರು.
ವಿಭಾಗದ ಮುಖ್ಯಸ್ಥರಾದ ಶಕುಂತಲಾ ಬಿ ಇವರು ಕಾರ್ಯಕ್ರಮ ಸಂಯೋಜಿಸಿದರು. ವಿಭಾಗದ ಎಲ್ಲಾ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ಬಿ ಎಸ್ಸಿ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ಭಿತ್ತಿಬರಹವನ್ನು ಅನಾವರಣಗೊಳಿಸಲಾಯಿತು. ಕುಮಾರಿ ಸಿರಿಷಾ ಇವರು ಸ್ವಾಗತಿಸಿ ಕುಮಾರಿ ಪ್ರೀತ ವಂದಿಸಿದರು . ದ್ವಿತೀಯ ಬಿ. ಎಸ್ಸಿ . ವಿದ್ಯಾರ್ಥಿನಿ ಪ್ರೀತಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ