ಪಿಲಿಕುಂಜೆ ಶ್ರೀ ಜಗದಂಬಾ ದೇವೀ ಕ್ಷೇತ್ರದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ

Upayuktha
0


ಕಾಸರಗೋಡು: ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಕಾಸರಗೋಡು ಪಿಲಿಕುಂಜೆ ಶ್ರೀ ಜಗದಂಬಾ ದೇವೀ ಕ್ಷೇತ್ರದಲ್ಲಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ವತಿಯಿಂದ 122ನೇ ವೈವಿಧ್ಯಮಯ ನಿತ್ಯನೂತನ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರಗಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಮಧುಲತಾ, ಶ್ರದ್ದಾ, ಪೂಜಾಶ್ರೀ, ನವ್ಯಶ್ರೀ, ಅಹನಾ, ಸನುಷ, ಮೇಧಾ, ಯಶಿಕಾ, ಶಿವಪ್ರಿಯ, ರಶ್ಮಿತಾ, ಮನೀಶ್, ತನುಶ್ರೀ, ಗೌತಮಿ, ಖುಷಿ, ಜಿಯಾ ಮುಂತಾದ ಕಲಾನಕ್ಷತ್ರಗಳು ತಮ್ಮ ಕಲಾ ಪ್ರದರ್ಶನವನ್ನು ಪ್ರಸ್ತುತಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.


ವೇಣುಗೋಪಾಲ್, ಸುಜಿತ್, ಸತೀಶ್ ಭಟ್, ಉಷಾ, ಅಚ್ಯುತ್ ಭಟ್ ಮುಂತಾದ ಗಣ್ಯರ ಸಮ್ಮುಖದಲ್ಲಿ ವೇದಿಕೆಯಲ್ಲಿ ಭಾಗವಹಿಸಿದ ಸಂಸ್ಥೆಯ ಎಲ್ಲಾ ಕಲಾರತ್ನಗಳಿಗೆ ಗೌರವ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು. ದೇವಸ್ಥಾನದ ವತಿಯಿಂದ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ಶಾಲು ಹೊದೆಸಿ ದೇವರ ಪ್ರಸಾದದೊಂದಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top