ಕನ್ನಡ ಗ್ರಾಮದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಸಾಂಸ್ಕೃತಿಕ ಸಮುಚ್ಚಯ
ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡಿನಲ್ಲಿ ನಿರಂತರವಾಗಿ ಕನ್ನಡ ಭಾಷೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 5 ಕೋಟಿ ರೂ ವೆಚ್ಚದಲ್ಲಿ 2 ಅಂತಸ್ತಿನ "ಕೇರಳ-ಕರ್ನಾಟಕ ಭವನ "ಸಾಂಸ್ಕೃತಿಕ ಸಮುಚ್ಚಯದ ನಿರ್ಮಾಣ ಯೋಜನೆಯನ್ನು ಕೈಗೊಳ್ಳಲಾಗಿದೆ. ಕಾಸರಗೋಡು ಕನ್ನಡ ಗ್ರಾಮದಲ್ಲಿ 300 ಆಸನವುಳ್ಳ ಸಾಂಸ್ಕೃತಿಕ ಭವನ ನಿರ್ಮಾಣವಾಗಲಿದೆ. ಹೋಂ ಸ್ಟೇ ಮಾದರಿಯ 4 ಅತಿಥಿಗೃಹ, ಪ್ರಾದೇಶಿಕ ಜಾನಪದ ವಸ್ತು ಸಂಗ್ರಹಾಲಯ,ಆರ್ಟ್ ಗ್ಯಾಲರಿ,ಸಾಂಸ್ಕೃತಿಕ, ಯಕ್ಷಗಾನ, ಸಾಹಿತ್ಯ ಕುಟೀರ, ಹಾಗೂ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ, ಯಕ್ಷಗಾನ, ನಾಟಕ, ಶಿಕ್ಷಣ ಅಧ್ಯಯನ ಕೇಂದ್ರ ನಿರ್ಮಾಣದ ಕಾರ್ಯ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ.
ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗಲಿರುವ "ಕೇರಳ-ಕರ್ನಾಟಕ ಭವನ" ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿ ಕಾಸರಗೋಡು ಸ್ವ ಉದ್ಯೋಗ ತರಬೇತಿ ಕೇಂದ್ರ, ಕೇರಳ ರಾಜ್ಯ ಕನ್ನಡ ಮಾಧ್ಯಮ ಕಂಪ್ಯೂಟರ್- ಡಿಜಿಟಲ್ ಕೇಂದ್ರ, ಉದ್ಯೋಗಸ್ಥ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ ಹೊಲಿಗೆ-ವಸ್ತ್ರ ವಿನ್ಯಾಸ ತರಬೇತಿ ಕೇಂದ್ರ, ಗ್ರಾಮೀಣ ಕ್ಲಿನಿಕ್- ಹಿರಿಯ ನಾಗರಿಕರಿಗಾಗಿ ವೈದ್ಯಕೀಯ ತಪಾಸಣಾ ಕೇಂದ್ರ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ, ಕೆ. ಯಶೋದ ಸ್ಮಾರಕ ಕಾಸರಗೋಡು ಗೋಶಾಲೆ,ಕೃಷಿ ಕುಟೀರ ಹಾಗೂ ಕನ್ನಡ ಗ್ರಾಮ ಸಂಸ್ಥಾಪಕ ಅಧ್ಯಕ್ಷರ ಕಾರ್ಯಾಲಯ ಪ್ರಾರಂಭಗೊಳ್ಳಲಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಕಾಸರಗೋಡು ಇದರ 35 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ 2025 ನವೆಂಬರ್ 4 ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ "ಕೇರಳ- ಕರ್ನಾಟಕ ಭವನ" ಸಾಂಸ್ಕೃತಿಕ ಸಮುಚ್ಚಯದ ಬೃಹತ್ ಯೋಜನೆಯ ಶಿಲಾನ್ಯಾಸ ನಡೆಯಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


