ಪೆರ್ನಾಜೆ: ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಕು. ಸಂಜನಾ ಎಸ್ ಗೆ ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಸನ್ಮಾನಿಸಿ ಆಶೀರ್ವದಿಸಿದರು.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೋಳ್ಯ ಕೆರೆ ನೂಜಿಯ ಡಾ. ವಿದ್ಯಾ ಸರಸ್ವತಿ ಪಿ.ಎಸ್ ಮತ್ತು ಗಣೇಶ್ ರಾಮಚಂದ್ರ ದಂಪತಿಯ ಪುತ್ರಿ ಸಂಜನಾ ಎಸ್. ಈಕೆ ಬೆಂಗಳೂರು ನಿವಾಸಿಯಾಗಿದ್ದು ಪಿಯುಸಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಲ್ಲಿ 595 ಅಂಕಗಳನ್ನು ಗಳಿಸಿದ್ದರು. ರಾಜ್ಯಕ್ಕೆ ಆರನೇ ಸ್ಥಾನ ಪಡೆದಿದ್ದರು.
ಇವರನ್ನು ವಿಜಯನಗರ ವಲಯದ ವತಿಯಿಂದ ಅ.12 ರಂದು ಗಿರಿನಗರದ ರಾಮಾಶ್ರಮದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಶಾಲು, ಪ್ರಶಂಸಾ ಪತ್ರ, ಫಲ, ವಿಶೇಷ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಕು. ಸಂಜನಾ ಎಸ್ ಪ್ರಸ್ತುತ ಬೆಂಗಳೂರಿನ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (kins)ನಲ್ಲಿ ಮುಂದಿನ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ