ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ರಾಜ್ಯದ 13 ಕಡೆಗಳಲ್ಲಿ 2000ನೇ ಮದ್ಯವರ್ಜನ ಶಿಬಿರ

Upayuktha
0


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಇಂದಿನಿಂದ (ಅ.30) ರಾಜ್ಯದ ಹದಿಮೂರು ಕಡೆಗಳಲ್ಲಿ 2000ನೇ ಮದ್ಯವರ್ಜನ ಶಿಬಿರ ಆಯೋಜಿಸಲಾಗಿದೆ ಎಂದು ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷರಾದ ನಟರಾಜ್ ಬಾದಾಮಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಮತ್ತು ರಾಜ್ಯ ಕಾರ್ಯದರ್ಶಿಯವರಾದ ವಿವೇಕ್ ವಿ. ಪಾಯಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬೆಳ್ತಂಗಡಿ, ಮೂಡಬಿದ್ರೆ, ಮಂಗಳೂರು, ಉಡುಪಿ, ಗುಬ್ಬಿ, ಮಧುಗಿರಿ, ಧಾರವಾಡ, ಬಸವಕಲ್ಯಾಣ, ಶ್ರೀರಂಗ ಪಟ್ಟಣ, ಅರಸೀಕೆರೆ, ಗದಗ, ತೀರ್ಥಹಳ್ಳಿ ಮತ್ತು ಕೊಪ್ಪದಲ್ಲಿ ಅ. 30 ರಿಂದ ನ.6ರ ವರೆಗೆ ಪ್ರತಿ ಶಿಬಿರದಲ್ಲಿ ತಲಾ 76 ರಂತೆ ಶಿಬಿರಾರ್ಥಿಗಳನ್ನು ಸೇರಿಸಿ ಒಂದು ಸಾವಿರ ವ್ಯಸನಿಗಳಿಗೆ ಮನಪರಿವರ್ತನೆ ಮೂಲಕ ವ್ಯಸನಮುಕ್ತರಾಗಿ ಮಾಡುವ ಗುರಿ ಹೊಂದಲಾಗಿದೆ.


ಈವರೆಗೆ 1987 ಮದ್ಯವರ್ಜನ ಶಿಬಿರಗಳ ಮೂಲಕ 1,33,000 ಮದ್ಯವ್ಯಸನಿಗಳನ್ನು ಮನಪರಿವರ್ತನೆ ಮೂಲಕ ವ್ಯಸನಮುಕ್ತರಾಗಿ ಮಾಡಲಾಗಿದೆ ಎಂದು ಅವರು ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top