ವಿರಮಿಸಿ ಹಾಗೂ ನವಚೇತನ ಪಡೆಯಿರಿ

Upayuktha
0

 ಆಳ್ವಾಸ್ ವಾಹನ ಚಾಲಕರಿಗೆ ವಿನೂತನ ಕಾರ್ಯಕ್ರಮ



ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮನಶಾಸ್ತ್ರ ವಿಭಾಗ ಹಾಗೂ ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಟ್ರೈನಿಂಗ್‌ವತಿಯಿಂದ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಸ್ ಚಾಲಕರಿಗಾಗಿ  ‘ವಿರಮಿಸಿ ಹಾಗೂ ನವಚೇತನ ಪಡೆಯಿರಿ’ ಎಂಬ ವಿಶೇಷ ಕಾರ್ಯಗಾರ ನಡೆಯಿತು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಸಮಾಜದಲ್ಲಿ ಐವತ್ತು ವರ್ಷಗಳ ಹಿಂದೆ ಚಾಲಕ ವೃತ್ತಿ, ಇಂದಿನ ವಿಮಾನದ ಪೈಲಟ್ ವೃತ್ತಿಯಂತೆ ಎಲ್ಲರಿಂದ ಮನ್ನಣೆಗೆ ಪಾತ್ರವಾಗಿತ್ತು.   ಕಾಲಕ್ರಮೇಣ, ಈ ವೃತ್ತಿಯ ಪ್ರಾಮುಖ್ಯತೆ ಕಡಿಮೆಯಾಗುತ್ತಿದ್ದರೂ, ವಾಸ್ತವದಲ್ಲಿ ಇದು ಅತ್ಯಂತ ಜವಾಬ್ದಾರಿಯುತ ಹಾಗೂ ಸವಾಲಿನ ಕೆಲಸವಾಗಿದೆ. ಚಾಲಕರು ದಿನನಿತ್ಯದ ಕೆಲಸದಲ್ಲಿ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮಾನಸಿಕ ಆರೋಗ್ಯವನ್ನು ಸ್ಥಿರವಾಗಿರಿಸಿಕೊಂಡು ಕಾಳಜಿಯುತವಾಗಿರುವುದು ಬಹಳ ಮುಖ್ಯ. ವಾಹನದ ಕಾರ್ಬೋರೇಟರ್ ಹೀಟ್ ಆದಾಗ ನೀರು ಬಳಕೆ ಮಾಡುವಂತೆ, ಇಂಜಿನ್ ಆಯಿಲ್ ನಿಯಮಿತವಾಗಿ ಬದಲಿಸುವಂತೆ, ನಮ್ಮ ಮನಸ್ಸಿಗೂ ವಿಶ್ರಾಂತಿ ಮತ್ತು ಸಮರ್ಪಕ ಆರೈಕೆ ಅಗತ್ಯ ಎಂದರು.


ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಟ್ರೈನಿಂಗ್‌ನ ನಿರ್ದೇಶಕಿ ಡಾ. ದೀಪಾ ಕೊಠಾರಿ  ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಚಾಲಕರಿಗೆ ತಂಡ ನಿರ್ವಹಣೆ, ಸಮಸ್ಯೆ ಪರಿಹಾರ, ಒತ್ತಡ ನಿರ್ವಹಣೆ ಹಾಗೂ ಸಂವಹನದ ಕುರಿತು ವಿವಿಧ ಚಟುವಟಿಕೆಗಳನ್ನು ನಡೆಸಿದರು.


ಕಾರ್ಯಕ್ರಮದಲ್ಲಿ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾರಿಗೆ ಅಧಿಕಾರಿ ರೋಶನ್, ಆಳ್ವಾಸ್ ಪದವಿ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ  ಜೋಸ್ವಿಟಾ ಇದ್ದರು. ಪತ್ರಿಕೋದ್ಯಮ ವಿದ್ಯಾರ್ಥಿನಿ ಶ್ರೀವಲ್ಲಿ ನಿರೂಪಿಸಿದರು. 



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top