ಮೂಡಬಿದಿರೆ: ಮಂಗಳೂರಿನ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.
ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ಎನ್.ಎಂ. ಪದವಿಪೂರ್ವ ಕಾಲೇಜು ಅರಂತೋಡು ತಂಡವನ್ನು 35-11, 35-12 ಅಂಕಗಳಿಂದ ಸೋಲಿಸಿ 20ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


