ಬೆಳ್ತಂಗಡಿ: ಹಾಸ್ಟೆಲ್ ನೂತನ ಕಟ್ಟಡ ಉದ್ಘಾಟನೆ ಮತ್ತು ಶಿಲಾನ್ಯಾಸ

Upayuktha
0


ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಕ್ಟೋಬರ್ 11 ರಂದು  ಬೆಳ್ತಂಗಡಿ ತಾಲೂಕಿನ  ವಿದ್ಯಾರ್ಥಿ ನಿಲಯದ  ನೂತನ ಕಟ್ಟಡ ಉದ್ಘಾಟನೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಲಿದೆ.


ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆ  ಮೆಟ್ರಿಕ್ ಪೂರ್ವ  ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, ಬೆಳಿಗ್ಗೆ 10.30 ಗಂಟೆಗೆ- ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ.


ಬೆಳಿಗ್ಗೆ  11.30 ಗಂಟೆಗೆ- ಬೆಳ್ತಂಗಡಿ ಟೌನ್ ನ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ಸಮಾರಂಭ , ಬೆಳ್ತಂಗಡಿ ತಾಲೂಕು ಉಜಿರೆಯ  ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ಸಮಾರಂಭ ನಡೆಯಲಿದೆ.


ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ  ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top