ಬೆಂಗಳೂರು: ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ) ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಸಿರು ಮಾರ್ಗದ ಮೆಟ್ರೋ ಹಳಿಗೆ ಹಾರಿ, ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಶನಿವಾರ ಮಧ್ಯಾಹ್ನ 3.19 ಕ್ಕೆ ಮೆಜೆಸ್ಟಿಕ್ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣಗಳ ನಡುವಿನ ಗ್ರೀನ್ ಲೈನ್‌ನಲ್ಲಿ ಈ ಘಟನೆ ಸಂಭವಿಸಿದೆ.
ಈತನನ್ನು ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ವೀರೇಶ್ನನ್ನು ಆ್ಯಂಬುಲೆನ್ಸ್ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.
ಆ ವ್ಯಕ್ತಿ ಮೆಟ್ರೋ ರೈಲಿನ ಕೆಳಗೆ ಸಿಲುಕಿಕೊಂಡಿದ್ದರಿಂದ, ಅಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವಾಗ ಮೂರನೇ ಪ್ಲಾಟ್‌ಫಾರ್ಮ್‌ನಲ್ಲಿ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಮಾರ್ಚ್ 2024 ರಲ್ಲಿ, ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಅದೃಷ್ಟವಶಾತ್, ಮೆಟ್ರೋ ರೈಲನ್ನು ಸಮಯಕ್ಕೆ ಸರಿಯಾಗಿ ನಿಲ್ಲಿಸಲಾಯಿತು, ಇದರಿಂದಾಗಿ ದುರಂತವೊಂದನ್ನು ತಪ್ಪಿಸಲಾಗಿತ್ತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


