ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಆಡಳಿತ ಮಂಡಳಿ (ನ್ಯಾಶನಲ್ ಮ್ಯಾನೇಜಿಂಗ್ ಬಾಡಿ) ಸದಸ್ಯರಾಗಿ ಮಂಗಳೂರಿನ ಸಿಎ ಶಾಂತರಾಮ ಶೆಟ್ಟಿ ಚುನಾಯಿತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಆಗಿರುವ ಸಿಎ ಶಾಂತರಾಮ ಶೆಟ್ಟಿ ಅವರು ರಾಷ್ಟ್ರೀಯ ಮಂಡಳಿ ಚುನಾವಣೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.
ನವದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ದೇಶದ 26 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಒಟ್ಟು 12 ಮಂದಿಗೆ ರಾಷ್ಟ್ರೀಯ ಮಂಡಳಿಗೆ ಆಯ್ಕೆಯಾಗಲು ಅವಕಾಶ ಇತ್ತು. ಸಿಎ ಶಾಂತರಾಮ ಶೆಟ್ಟಿ ಅವರು ಅತೀ ಹೆಚ್ಚು 22 ಮತ ಪಡೆದು ದಕ್ಷಿಣ ವಲಯದಿಂದ ಆಯ್ಕೆಯಾದರು.
ದ.ಕ.ಜಿಲ್ಲಾ ರೆಡ್‌ಕ್ರಾಸ್‌ನ 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಚೇರ್ಮನ್‌ಗೆ ರಾಷ್ಟ್ರೀಯ ನಿರ್ವಹಣಾ ಮಂಡಳಿಗೆ ಆಯ್ಕೆಯಾಗುವ ಅವಕಾಶ ದೊರೆತಿದೆ. ಪ್ರಸ್ತುತ ರೆಡ್‌ಕ್ರಾಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಕಾರ್ಯ ನಿರ್ವಹಿಸುತ್ತಿದ್ದಾರೆ.
22 ರಾಜ್ಯಗಳ ಪ್ರತಿನಿಧಿಗಳು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ಯಾವುದೇ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ರಾಜ್ಯ ಹಾಗೂ ಎಲ್ಲ ಜಿಲ್ಲಾ ರೆಡ್‌ಕ್ರಾಸ್ ಘಟಕಗಳಿಗೆ ರಾಷ್ಟ್ರೀಯ ಕಚೇರಿಯ ಮೂಲಕ ಅಗತ್ಯ ಸೇವೆಗಳನ್ನು ತಲುಪಿಸುವುದು ನನ್ನ ಉದ್ದೇಶ. ಇದು ನನ್ನ ಸಮಾಜಸೇವೆಯ ಮಾರ್ಗದಲ್ಲಿನ ದೊಡ್ಡ ಮೈಲುಗಲ್ಲು ಎಂದು ಸಿಎ ಶಾಂತರಾಮ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ