ಮಂಗಳೂರು: ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ, ದಿ.ಮನೋಹರ ಪ್ರಸಾದ್ ಸಂಸ್ಕರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನ.1 ರಂದು ಮಧ್ಯಾಹ್ನ 3.30ಕ್ಕೆ ಕುತ್ತಾರಿನ ಹೋಟೆಲ್ ವೆಜಿನೇಷನ್ ಸಭಾಂಗಣದಲ್ಲಿ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಕದ್ರಿ ನವನೀತ ಶೆಟ್ಟಿ ಅವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಳ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ ಕೆ., ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ, ಫೋಟೋಗ್ರಾಫರ್ಸ್ ಅಸೋಸಿಯೇಶನ್‌ನ ಉಳ್ಳಾಲ ಘಟಕದ ಅಧ್ಯಕ್ಷ ರಾಜೇಶ್ ಉಳ್ಳಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ವಿದ್ಯಾಧರ ಶೆಟ್ಟಿ, ಛಾಯಾಗ್ರಾಹಕ ಅಶೋಕ್ ಉಳ್ಳಾಲ್, ಪವರ್ ಲಿಫ್ಟರ್ ಗೀತಾ ಬಾಯಿ ಇವರುಗಳನ್ನು ಸನ್ಮಾನಿಸಲಾಗುವುದೆಂದು ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


