ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಪ್ರಿಯಾಂಕ ಖರ್ಗೆಯವರು ಮಾನ್ಯ ಮುಖ್ಯಮಂತ್ರಿಯವರಿಗೆ ಕಳುಹಿಸಿರುವ ಪತ್ರವನ್ನು ತೀವ್ರವಾಗಿ ಖಂಡಿಸುತ್ತದೆ. RSS ಸಂಘದ ಚಟುವಟಿಕೆಗಳನ್ನು ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು, ಮೈದಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ನಿಷೇಧಿಸಬೇಕೆಂದು ಹೇಳಿರುವುದು ಸಂಪೂರ್ಣ ಖಂಡನೀಯವಾಗಿದೆ.
ಪ್ರತಿಷ್ಠಿತ ಸಂಸ್ಥೆಯಾಗಿರುವ RSS ದೇಶಾದ್ಯಂತ ವಿವಿಧ ಸ್ವಯಂಸೇವಕರ ಮೂಲಕ ಪ್ರಕೃತಿ ವಿಕೋಪ ಮತ್ತು ದುರಂತಗಳ ಸಂದರ್ಭದಲ್ಲಿ ಪ್ರಥಮವಾಗಿ ಸಹಾಯ ಕಾರ್ಯವನ್ನು ಮಾಡುತ್ತದೆ. ಇದನ್ನು ಪರಿಗಣಿಸಿ, 1963 ರಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಆಗಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು RSS ಗೆ ಗಣವೇಶಧಾರಿಗಳಾಗಿ ಭಾಗವಹಿಸಲು ಆಹ್ವಾನ ನೀಡಿದ್ದರು.
ಹಾಗೆಯೇ, 2024 ರಲ್ಲಿ ಕೇಂದ್ರ ಸರ್ಕಾರವು RSS ಅನ್ನು ಸಾಮಾಜಿಕ ಸಂಘಟನೆ ಎಂದು ಪರಿಗಣಿಸಿ, ಕಾಂಗ್ರೆಸ್ ಪಕ್ಷದ ಆಡಳಿತವು ಹಿಂದೆ ಹಾಕಿದ್ದ ನಿಷೇಧವನ್ನು ತೆಗೆದು, ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಬಹುದೆಂದು ಆದೇಶ ಹೊರಡಿಸಿದೆ. ಇಂತಹ ರಾಷ್ಟ್ರ ಪ್ರೇಮವನ್ನು ಬೆಳಸುವ ಸಂಘಟನೆಯ ಚಟುವಟಿಕೆಗಳನ್ನು ನಿಷೇಧ ಮಾಡುವುದು ಖಂಡನೀಯ
ವಾಸ್ತವದಲ್ಲಿ, ದೇಶದಲ್ಲಿ ವಿಭಜನೆ ಮತ್ತು ದ್ವೇಷ ಬಿತ್ತುವ ಕಾರ್ಯವನ್ನು ಕಾಂಗ್ರೆಸ್ ಪಕ್ಷವೇ ಮಾಡುತ್ತಿದೆ. ಕರ್ನಾಟಕದಲ್ಲಿ ಜಾತಿ ಸಮೀಕ್ಷೆಗಳನ್ನು ನಡೆಸಿ ಸಮಾಜವನ್ನು ವಿಭಜಿಸುವುದು, ಅಂತಾರಾಷ್ಟ್ರೀಯ ಭಯೋತ್ಪಾದಕ ಜಾಕೀರ್ ನಾಯ್ಕ್ ಸೇರಿದಂತೆ PFI, SDPI ಮುಂತಾದ ವಿಭಜಕ ಶಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಪ್ರಕ್ರಿಯೆಯಾಗಿದೆ. ಈ ಹಿನ್ನೆಲೆಯಲ್ಲಿ, ಸಂಘದ ಚಟುವಟಿಕೆಯನ್ನು ನಿಷೇಧಿಸುವ ಯತ್ನವು ಹಿಂದೂ ಧರ್ಮವನ್ನು ನಿಷೇಧಿಸುವ ಷಡ್ಯಂತ್ರದ ಭಾಗವಾಗಿದೆ. ಹಿಂದೂ ಜನಜಾಗೃತಿ ಸಮಿತಿ ಈ ನಿಷೇಧದ ಯತ್ನವನ್ನು ತೀವ್ರವಾಗಿ ಖಂಡಿಸುತ್ತದೆ.
-ಮೋಹನ ಗೌಡ
ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ