ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 6 ರಂದು ಬೆಳಿಗ್ಗೆ 10.45 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಭಾರತೀಯ ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಸುಧಾಕರ್ ಮಲ್ಯ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಗೌರವ ಉಪಸ್ಥಿರಿರುವರೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


