ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಇದರ ಅಂಗಸಂಸ್ಥೆಯಾದ ವಿ.ಟಿ. ರಸ್ತೆಯ ಚೇತನಾ ಬಾಲ ವಿಕಾಸ ಕೇಂದ್ರದಲ್ಲಿ ಗುರುವಾರ (ಅ.23) ದೀಪಾವಳಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಜಿ.ಎಸ್.ಬಿ ಮಹಿಳಾ ವೃಂದ (ರಿ) ಇವರ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಚೇತನ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು.
ಶಾಲಾ ಶಿಕ್ಷಕಿಯರು ರಂಗೋಲಿಯನ್ನು ಬಿಡಿಸಿ, ನಂತರ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಲಕ್ಷ್ಮೀ ಪೂಜೆಯೊಂದಿಗೆ ದೇವರ ಸ್ತುತಿಗೈಯಲಾಯಿತು. ಸಂಘದ ಪರವಾಗಿ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ಮತ್ತು ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಪೋಷಕರು ಮತ್ತು ಶಿಕ್ಷಕರೊಂದಿಗೆ ಮಕ್ಕಳು ಪಟಾಕಿ ಸಿಡಿಸಿ ಖುಶಿ ಪಟ್ಟರು.
ಸಮಾರಂಭದಲ್ಲಿ ಚೇತನಾ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರೀತಾ, ಜಿ. ಎಸ್. ಬಿ ವೃಂದದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಪಿ. ಕಾಮತ್, ಇತರ ಪದಾಧಿಕಾರಿಗಳು, ಶಾಲಾ ಶಿಕ್ಷಕಿಯರು ಮತ್ತು ಶಿಕ್ಷಕೇತರರು, ಇತರ ಸಿಬ್ಬಂದಿ ವರ್ಗದವರು, ಸ್ವಯಂಸೇವಕರು ಹಾಗೂ ಪೋಷಕರು ಪಾಲ್ಗೊಂಡರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

