ವಿಶೇಷ ಚೇತನ ಮಕ್ಕಳ ಬದುಕಿಗೆ ಬೆಳಕು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆಶಯ
ಮಂಗಳೂರು: ವಿಶೇಷ ಚೇತನ ಮಕ್ಕಳು ದೇವರ ಸಮಾನರಾಗಿದ್ದು ಅವರ ಬದುಕಿಗೆ ಬೆಳಕಾಗುವುದು ಸಮಾಜದ ಕರ್ತವ್ಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ರೈತ ಕುಡ್ಲ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಲಾದ ರೈತ ಮೇಳದಲ್ಲಿ ಚೇತನಾ ಬಾಲ ವಿಕಾಸ ಕೇಂದ್ರದ ಮಕ್ಕಳೊಂದಿಗೆ ದೀಪಾವಳಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೀಪಾವಳಿ ಕೃಷಿ ಬದುಕಿನ ಹಬ್ಬವಾಗಿದ್ದು, ರೈತ ಮೇಳದಲ್ಲಿ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಕೃಷಿಕರ ಬದುಕಿಗೂ ಬೆಳಕು ನೀಡುವ ಕಾರ್ಯವಾಗಿದೆ ಎಂದು ಅವರು ಶ್ಲಾಘಿಸಿದರು.
ಶಾಸಕ ಡಿ.ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಉದ್ಯಮಿ ಸತ್ಯೇಂದ್ರ ಶರ್ಮ, ಋತ್ವಿಕ್ ಕದ್ರಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ, ಕಾರ್ಯದರ್ಶಿ ಲತೇಶ್ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


