ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ ಕಾರ್ಯಕ್ರಮ ವೈವಿಧ್ಯ

Chandrashekhara Kulamarva
0


ಕಾಸರಗೋಡು: ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಹತ್ತು ದಿನಗಳ ಕಾಲ ಶಾಸ್ತ್ರಬದ್ದವಾಗಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಂದೊಡಗೂಡಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಸಂಸ್ಥೆಯ ಸಾಂಸ್ಕೃತಿಕ ಕಲಾ ವೈಭವವನ್ನು ಪ್ರಸ್ತುತಪಡಿಸಿತು.


ಗುರುರಾಜ್ ಕಾಸರಗೋಡು ಅವರ ಆಯೋಜನೆ ಹಾಗೂ ನಿರೂಪಣೆಯಿತ್ತು. ಕಲಾ ಪ್ರಸ್ತುತಿಯಲ್ಲಿ 30ಕ್ಕೂ ಹೆಚ್ಚು ಮಕ್ಕಳು ಪ್ರತಿಭಾ ಪ್ರದರ್ಶನ ಮಾಡಿದರು.


ಕಾರ್ಯಕ್ರಮದ ವೇದಿಕೆಯಲ್ಲಿ ಮಂಜುನಾಥ ಆಳ್ವ, ಗೋಪಾಲಕೃಷ್ಣ ಶೆಟ್ಟಿ, ಮೋಹನ್ ಶೆಟ್ಟಿ, ಸಂಸ್ಥೆಯ ಗೌರವಾಧ್ಯಕ್ಷ ಗಣೇಶ್ ಪ್ರಸಾದ್ ಆಳ್ವ, ಸಂಸ್ಥೆಯ ಜೊತೆ ಕಾರ್ಯದರ್ಶಿ ಕುಮಾರಿ ವರ್ಷಾ ಶೆಟ್ಟಿ, ಸಂಸ್ಥೆಯ ಸದಸ್ಯರು ಶ್ರೀಮತಿ ದಿವ್ಯ, ಸುಭಾಶ್ ಆಳ್ವ, ಹೋಟೆಲ್ ಉದ್ಯಮಿ ಬಾಲಕೃಷ್ಣ ಭಟ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.


ಸಮ್ಮುಖದಲ್ಲಿ ಸಂಸ್ಥೆಯ ಪ್ರತಿಭಾ ಸಂಪನ್ನ ಕಲಾವಿದೆ ಹಾಗೂ ಸಂಸ್ಥೆಯ ಕೋಶಾಧಿಕಾರಿ ಶೈಲಜಾ ಹೊಳ್ಳ ಅವರನ್ನು ಅವರು ಸಂಸ್ಥೆಗೆ ನೀಡುತ್ತಿರುವ ಪ್ರೋತ್ಸಾಹ, ಮತ್ತು ಅವರಲ್ಲಿರುವ ಆಗಾಧ ಕಲೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಕಲಾ ಸೌರಭ 2025 ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಷಾ ಸುಧಾಕರನ್ ಅವರನ್ನೂ ಅವರ ಅಪ್ರತಿಮ ಗಾನ ಹಾಗೂ ನೃತ್ಯ ಪ್ರತಿಭೆಯನ್ನು ಗುರುತಿಸಿ ಸಂಸ್ಥೆಯ ಗಾಯನ ಪ್ರಶಸ್ತಿಯಾದ ಸ್ವರಗಾನ ಸಿರಿ 2025 ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಭಾಗವಹಿಸಿದ ಸಂಸ್ಥೆಯ ಕಲಾವಿದರಿಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top