ಧರ್ಮತ್ತಡ್ಕ ಶಾಲೆಯಲ್ಲಿ ಗಾಂಧೀ, ಶಾಸ್ತ್ರಿ ಜಯಂತಿ ಆಚರಣೆ

Upayuktha
0


ಧರ್ಮತ್ತಡ್ಕ, ಅ. 2: ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಯ ಎಸ್ಪಿಸಿ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.


ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಷಾ ಪದ್ಮ ಟೀಚರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಡಕ್ಕಾನ ಕೇಶವ ಪ್ರಸಾದ್ ಸಹಕರಿಸಿದರು. ಈಶ್ವರಿ ಡಿ ಸ್ವಾಗತಿಸಿ ಶಿವಪ್ರಸಾದ್ ಚೆರುಗೋಳಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.


ಸಭಾ ಕಾರ್ಯಕ್ರಮದ ಬಳಿಕ ದೇಶಭಕ್ತಿ ಗೀತೆ, ಭಾಷಣ, ರಸಪ್ರಶ್ನೆ, ಗಾಂಧೀಜಿ ಭಾವಚಿತ್ರ ರಚನೆ, ಪೋಸ್ಟರ್ ರಚನೆಯ ಸ್ಪರ್ಧೆಗಳನ್ನು ನಡೆಸಿ ಬಹುಮಾನವನ್ನು ನೀಡಲಾಯಿತು. ಬಳಿಕ ವಿದ್ಯಾರ್ಥಿಗಳು ಶಾಲಾ ಆವರಣವನ್ನು ಶುಚಿಗೊಳಿಸಿದರು‌.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top