ಉಡುಪಿ: ಗಾಂಧಿ: ಒಂದು ವಿಭಿನ್ನ ದೃಷ್ಟಿಕೋನದಿಂದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿ ಇಲ್ಲಿ ‘Gandhii – From a different perspective’ ಎಂಬ ವಿಶೇಷ ಉಪನ್ಯಾಸ ಬುಧವಾರ 29 ಅಕ್ಟೋಬರ್ 2025 ರಂದು ಕಾಲೇಜಿನ ಟಿ. ಮೋಹನ್‌ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. ಈ ಸಂದರ್ಭ ಎಂ.ಜಿ.ಎಂ. ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನಿತ್ ರಾವ್ ಮುಖ್ಯ ಭಾಷಣಕಾರರಾಗಿ ಉಪಸ್ಥಿತರಿದ್ದರು.
ಅವರು ತಮ್ಮ ಉಪನ್ಯಾಸದಲ್ಲಿ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಇಂದಿನ ಸಮಾಜದಲ್ಲಿಯೂ ಹೇಗೆ ಪ್ರಸ್ತುತವಾಗಿವೆ ಎಂಬುದರ ಕುರಿತು ಆಳವಾದ ವಿಶ್ಲೇಷಣೆ ನೀಡಿದರು. ಗಾಂಧೀಜಿಯವರ ಅಹಿಂಸಾ, ಸತ್ಯ ಮತ್ತು ಸ್ವಾವಲಂಬನೆಯ ತತ್ವಗಳನ್ನು ಯುವ ಪೀಳಿಗೆಯು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ಬಿಸಿಎ ವಿದ್ಯಾರ್ಥಿನಿ ಮಿಥಾಲಿ ಪೈ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
