ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಜಯಂಟ್ಸ್ ಕೇರ್ ಫೌಂಡೇಶನ್ ನ ಉದ್ಘಾಟನೆ ಮತ್ತು ಗ್ರೇಟ್ ಡೇ ಸೆಲೆಬ್ರೇಶನ್ ಕಾರ್ಯಕ್ರಮ ಬ್ರಹ್ಮಾವರ ಸಿಟಿ ಸೆಂಟರ್ ನಲ್ಲಿ ಅ. 11 ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಸ್ ಡಿ ಎಂ ಆಯುರ್ವೇದಿಕ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಪೂಜಾರಿ, ಕರ್ಮ ಯೋಗವು ಅತ್ಯಂತ ಶ್ರೇಷ್ಠವಾಗಿದೆ ಸಮಾಜದಲ್ಲಿ ಸಂಘಟಿತರಾಗಿ ಉತ್ತಮ ಕಾರ್ಯವನ್ನು ಮಾಡಿದಾಗ ಅದು ಸಮಾಜದ ಅಭಿವೃದ್ಧಿಗೆ ನಾಂದಿಯಾಗುತ್ತದೆ. ಇಂದು ಸಮಾಜದಲ್ಲಿ ನಡೆಯುತ್ತಿರುವ ಅನೇಕ ರೀತಿಯ ಸಮಸ್ಯೆಗಳಿಗೆ ನಾವೇ ಕಾರಣ ಎಲ್ಲರೂ ಕೂಡ ವಿಶಾಲ ಮನೋಭಾವನೆಯಿಂದ ಕಾರ್ಯಮಾಡಿದಾಗ ಎಲ್ಲ ಸಮಸ್ಯೆಗಳು ನಿವಾರಣೆಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಕಳೆದ ಹಲವಾರು ವರ್ಷಗಳಿಂದ ಉತ್ತಮ ಕಾರ್ಯ ಮಾಡುತ್ತಿರುವುದು ಅಭಿನಂದನನಿಯ ಎಂದರು.
ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್ ವಹಿಸಿ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯದರ್ಶಿ, ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು. ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು. ನಿಕಟ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮೂಡು ಕುಕ್ಕುಡೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ರಂಗ ನಟ ಮತ್ತು ಚಲನಚಿತ್ರ ನಟ ಪ್ರಭಾಕರ್ ಕುಂದರ್; ಪೌರಕಾರ್ಮಿಕ ಶೇಖರ್; ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸತೀಶ್ ಕುಮಾರ್ ಶೆಟ್ಟಿ ಡಾ. ರೇಖಾ ನವೀನ್ ಮತ್ತು ನವೀನ್ ಚಂದ್ರ ಎನ್.ಎಚ್ ಇವರನ್ನು ಸನ್ಮಾನಿಸಲಾಯಿತು.
ಗಾಯತ್ರಿ, ವನಜಾಕ್ಷಿ, ರೊನಾಲ್ಡ್ ಡಯಸ್. ವಿವೇಕಾನಂದ ಕಾಮತ್ ಅತಿಥಿಗಳನ್ನು ಪರಿಚಯಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.
ದೀತ್ಯಾ, ಆದ್ಯಾ ಅವರಿಂದ ನೃತ್ಯ ಮತ್ತು ರೊನಾಲ್ಡ್ ಡಯಸ್ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ