ಕೋಡಿ ಬೆಂಗ್ರೆ ಹಂಗಾರಕಟ್ಟೆ ಬಾರ್ಜ್ ಲೋಕಾರ್ಪಣೆ

Upayuktha
0


ಉಡುಪಿ: ಸುಮಾರು 2,05,78,040 ರೂ ವೆಚ್ಚದಲ್ಲಿ ಕೋಡಿ ಬೆಂಗ್ರೆ- ಹಂಗಾರಕಟ್ಟೆ ನದಿಯ ನಡುವೆ ಸಂಪರ್ಕ ಕಲ್ಪಿಸುವ ಮಧ್ಯಮ ಗಾತ್ರದ ಹೊಸ ಬಾರ್ಜ್ ಕಾವೇರಿ ಅನ್ನು ಲೋಕಾರ್ಪಣೆ ಗೊಳಿಸಲಾಯಿತು. 


ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ ಬಾರ್ಜ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಕೋಡಿ ಬೆಂಗ್ರೆಯಿಂದ ಹಂಗಾರಕಟ್ಟೆಗೆ ಸ್ಥಳೀಯ ಜನರು ಹಾಗೂ ಪ್ರವಾಸಕ್ಕೆಂದು ಆಗಮಿಸಿರುವ ಪ್ರಾವಸಿಗರಿಗೂ ಸಹ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳಸಲು ಅನುಕೂಲವಾಗಲಿದೆ. ಬಾರ್ಜ್ ಇಲ್ಲದಿದ್ದಲ್ಲಿ ರಸ್ತೆ ಮೂಲಕ ಸುತ್ತುವರಿದು ಹೋಗಬೇಕಿತ್ತು ಎಂದ ಅವರು ಮುಂದಿನ ದಿನಗಳಲ್ಲಿ ಸ್ಥಳೀಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.


ಹಂಗಾರಕಟ್ಟೆ ಬಂದರಿನಲ್ಲಿ ಮೀನುಗಾರಿಕಾ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಬಂದರಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಹಾಗೂ ಇದರ ಜೊತೆಯಲ್ಲಿ ಹೂಳೆತ್ತುವ ಕಾರ್ಯವನ್ನು ಮಾಡಲಾಗುವುದು ಎಂದ ಅವರು, ಶೆಡ್ ನ ನಿರ್ಮಾಣದ ಕಾಮಗಾರಿಯನ್ನು 50ಲಕ್ಷ ರೂ ಗಳಲ್ಲಿ ಕೈಗೊಳ್ಳಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ ಇದನ್ನು ಉನ್ನತೀಕರಣಗೊಳಿಸುವುದರೊಂದಿಗೆ ಅಭಿವೃದಿ ಪಡಿಸಬೇಕು. ಸರ್ಕಾರದ ಮಟ್ಟದಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.  


ಕೋಡಿ-ಬೆಂಗ್ರೆ ಗ್ರಾಮವನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋೀಷಿಸಲಾಗಿದೆ. ಸ್ಥಳೀಯ ಜನರು ವ್ಯಸನ ಮುಕ್ತವಾಗಿರುವುದು ಒಂದು ಉತ್ತಮ ಕಾರ್ಯವಾಗಿದ್ದು ಇದರಿಂದ ಜನರ ಆರೋಗ್ಯ ಹೆಚ್ಚಿನ ಸುಧಾರಣೆ ಸಾಧ್ಯವಾಗುತ್ತದೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.


ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿವೇಕ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ, ಮುಖಂಡರುಗಳಾದ ದಿನೇಶ್ ಹೆಗ್ಡೆ,  ರಾಜು ಬಂಗೇರ, ಪ್ರಸಾದ್ ಪಿಂಗಳಾಯ ಮತ್ತಿತರರು ಉಪಸ್ಥಿತರಿದ್ದರು. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top