ನಿಟ್ಟೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

Upayuktha
0


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸ್ಪಿಕ್-ಮೆಕೆ ಮಂಗಳೂರು ಚಾಪ್ಟರ್ ನ ಸಹಯೋಗದೊಂದಿಗೆ ಅಕ್ಟೋಬರ್ 13 ರಂದು ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿತ್ತು.


ಸಂಗೀತ ಕಾರ್ಯಕ್ರಮವನ್ನು ಪ್ರಸಿದ್ಧ ಗಾಯಕಿ ವಿದುಷಿ ಅಮೃತಾ ಮುರಳಿ ಅವರು ನಡೆಸಿಕೊಟ್ಟರು. ಅವರಿಗೆ ಮೃದಂಗದಲ್ಲಿ ವಿದ್ವಾನ್ ಬಿ. ಎಸ್. ಪ್ರಶಾಂತ್ ಮತ್ತು ವಯೊಲಿನ್ ನಲ್ಲಿ ವಿದುಷಿ ಅದಿತಿ ಕೃಷ್ಣಪ್ರಕಾಶ್ ಸಹಕರಿಸಿದರು.


ಸೊಸೈಟಿ ಫಾರ್ ದಿ ಪ್ರಮೋಷನ್ ಆಫ್ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್ ಅಂಡ್ ಕಲ್ಚರ್ ಅಮಾಂಗ್ ಯೂತ್ (ಸ್ಪಿಕ್ ಮೆಕೆ) ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಮತ್ತು ಸಂಗೀತಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಕೃಷ್ಣರಾಜ ಜೋಯಿಸ ಕಾರ್ಯಕ್ರಮ ಸಂಯೋಜಿಸಿದರು. ಅಂತಿಮ ವರ್ಷದ ರೊಬೊಟಿಕ್ಸ್ ಮತ್ತು ಎಐ ವಿದ್ಯಾರ್ಥಿನಿ ಫರೀಜಾ ಕಾರ್ಯಕ್ರಮವನ್ನು ನಿರೂಪಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top