ಮಂಗಳೂರು: ಮಂಗಳೂರು ಮಕ್ಕಳ ದಸರಾ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳು "ಎಸ್.ಡಿ.ಎಂ ಕಲಾವೈಭವ" ಸಾಂಸ್ಕೃತಿಕ ಕಾರ್ಯಕ್ರಮವನ್ನು ಸೆ. 28 ರಂದು ಕುದ್ರೋಳಿ ಶ್ರೀ ಗೋಕರ್ಣಥೇಶ್ವರ ದೇವಸ್ಥಾನದಲ್ಲಿ ನೀಡಿ ಎಲ್ಲಾ ವೀಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಮೋಹಿನಿಯಾಟ್ಟಮ್, ಭರತನಾಟ್ಯ, ಫ್ಲೆಮಿಂಕೋ, ಗಾರ್ಭ ದಾಂಡಿಯಾ, ಕಥಕ್, ತೈಯಂ, ಕಲಿಂಕ, ಜೊತೆಗೆ ವಿವಿಧ ರಾಜ್ಯಗಳ ಸಂಸ್ಕೃತಿಯನ್ನು ಬಿಂಬಿಸುವ ಫ್ಯೂಷನ್ ನೃತ್ಯ ಮತ್ತು 20 ನಿಮಿಷಗಳ ವಿವಿಧ ರಾಷ್ಟೀಯ ಹಾಗೂ ಅಂತರಾಷ್ಟ್ರೀಯ ವಿವಿಧ ಪ್ರಕಾರಗಳನ್ನೊಳಗೊಂಡ ಶ್ರೀ ರಾಮ ಪಟ್ಟಾಭಿಷೇಕ ಮೂಲಕ ಸಂಪೂರ್ಣ ರಾಮಾಯಣವನ್ನು ಒಟ್ಟು 170 ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದು, ಎಲ್ಲಾ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


