ಎಸ್‌ಡಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ Lab In Cab ಕಾರ್ಯಕ್ರಮ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿಯಲ್ಲಿ Lab In Cab ಕಾರ್ಯಕ್ರಮವನ್ನು ಇಂದು (ಅ.23) ಹಮ್ಮಿಕೊಳ್ಳಲಾಯಿತು. ಶಾಲೆಯ 8 ಹಾಗೂ 9 ನೇ ತರಗತಿಯಲ್ಲಿ ಕಲಿಯುತ್ತಿರುವ 86 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.


ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳ ವಿನ್ಯಾಸ ಹಾಗೂ ಸಸ್ಯ ಬಾಷ್ಪೀಕರಣವನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನಯನಾ ಹಾಗೂ ಶ್ರೀಮತಿ ಪ್ರೀತಿ ಅವರು ಕಾರ್ಯಕ್ರಮಕ್ಕೆ ಸಹಕಾರವಿತ್ತರು.


ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್., ಹಾಗೂ ಶ್ರೀಮತಿ ಭವ್ಯಾ ಡಿ. ನಾಯಕ್ ಕಾರ್ಯಕ್ರಮ ಆಯೋಜಿಸಿದರು. ಸಸ್ಯಶಾಸ್ತ್ರ ವಿಭಾಗದ ಕು. ಮೇಘಾ, ವಿಭಾಗದ ಸಹಾಯಕರಾದ ಸುಂದರ, ವಿದ್ಯಾರ್ಥಿಗಳಾದ ಸಿರೀಶಾ ಶಾಸ್ತ್ರಿ ಹಾಗೂ ಪ್ರೀತಿ ಸಹಕರಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top