ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

Upayuktha
0


ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಧ್ವನಿ ಸಂಚಿಕೆ ಒಂದರ ಅಂತಿಮ ಹಂತದ ಸ್ಪರ್ಧೆಯಲ್ಲಿ ಮಧುನಾಯ್ಕ.ಲಂಬಾಣಿ ಯವರ ರಚನೆಯ ಸಿಂಗಾರ ಹಾಡನ್ನು ಹೊಸಪೇಟೆಯ ಖ್ಯಾತ ಗಾಯಕಿ ಕಮಲಾ ಕುಲಕರ್ಣಿ ಯವರು ಬಿಡುಗಡೆಗೊಳಿಸಿದರು. 


ಈ ಹಾಡಿಗೆ ರಾಗ ಸಂಯೋಜನೆ ಮಾಡಿ ಹಾಡಿದ ಗಾಯಕಿ ಶ್ರೀಮತಿ ಲಲಿತ ಸಿದ್ದಿ ಹಾಗೂ ಈ ಹಾಡಿಗೆ ಸಂಗೀತ ಸಂಯೋಜನೆ ಶ್ರೀನಿವಾಸನಾಯ್ಕ ಡೈರೆಕ್ಷನ್ ರವಿಕಿರಣ, ಎಡಿಟಿಂಗ್ ಅಭಿಷೇಕ ಎಂ. ನೃತ್ಯ ಪಲ್ಲವಿ ಎಲ್. ಇವರದ್ದಾಗಿದೆ.

ರಾಜ್ಯದಾದ್ಯಂತ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು  ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ  ರಾಜ್ಯ ಅಧ್ಯಕ್ಷರಾದ ಮಧುನಾಯ್ಕ. ಲಂಬಾಣಿ, ಗೌರವ ಅಧ್ಯಕ್ಷರು ಮತ್ತು ಲೇಖಕರು ಗೊರೂರು ಅನಂತರಾಜು, ಉಪಾಧ್ಯಕ್ಷರು, ವಿರುಪಾಕ್ಷಪ್ಪ ಯು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ ಎಸ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಸದಸ್ಯರಾದ ಆಶಾರಾಣಿ ಬಾಬುರಾವ್ ನಡೋಣಿ, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಅಧ್ಯಕ್ಷ ಪಿ ವಿ ವೆಂಕಟೇಶ್, ಸಂಘದ ತಾಲೂಕು ಘಟಕದ ಅಧ್ಯಕ್ಷ ಉದೇದಪ್ಪ,  ನಿವೃತ್ತ ಪೋಲಿಸ್ ಅಧಿಕಾರಿ ಡಿ. ಎಸ್.ಗಜೇಂದ್ರ ನಾಯ್ಕ,   ನಬಿಸಾಬ್ ಕುಷ್ಟಗಿ,  ಕರೋಕೆ ಹಾಡುಗಾರಿಕೆ ಸ್ಪರ್ಧೆಯ ತೀರ್ಪುಗಾರರಾದ ಕುಬೇರನಾಯ್ಕ, ದಾವಣಗೆರೆ ಹಾಗೂ ಸ್ವರೂಪ ಭಾರದ್ವಾಜ, ಚಿಕ್ಕಮಗಳೂರುರವರು ಹಾಜರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top