ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಪಶ್ಚಿಮಜಾಗರ ಪೂಜೆ

Upayuktha
0


ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಶ್ವೀಜ ಮಾಸದ ಶುದ್ಧ ಏಕಾದಶಿಯಿಂದ ಕಾರ್ತಿಕ ಶುದ್ಧ ಏಕಾದಶಿಯವರೆಗೆ ಪಶ್ಚಿಮಜಾಗರ ಪೂಜೆಯು ನಡೆಯುತ್ತದೆ.


ಆಷಾಢಶುಧ್ಧ ಏಕಾದಶಿಯಿಂದ ಭಗವಂತ ಯೋಗನಿದ್ರೆ ಯಲ್ಲಿ ಇರುತ್ತಾರೆಂಬ ನಂಬಿಕೆ. ಈ ಒಂದು ತಿಂಗಳು ಬೆಳಿಗ್ಗೆ ಅಪೂರ್ವ ವಾದ್ಯಘೋಷದ ಬಳಿಕ ಪಶ್ಚಿಮ ಜಾಗರ ಪೂಜೆಯನ್ನು ಮಾಡಲಾಗುತ್ತದೆ. ಯೋಗನಿದ್ರೆಯಿಂದ ಭಗವಂತನನ್ನು ಎಚ್ಚರಿಸಲು ಭಕ್ತರು ಮಾಡುವ ಸೇವೆ ಇದಾಗಿದೆ. ಈ ಪೂಜಾ ಆಚರಣೆಯನ್ನು ಮಧ್ವಾಚಾರ್ಯರು ವರಾಹಪುರಾಣದಿಂದ ಉಲ್ಲೇಖಿಸಿ ಚಾಲ್ತಿಗೆ ತರಲಾಗಿದೆ.


ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಬೆಳಿಗ್ಗೆ ಸುಮಾರು 4ಗಂಟೆಯಿಂದ ವಾದ್ಯಘೋಷ ಅನುಕ್ರಮವಾಗಿ ಶಂಖ, ನಗಾರಿ, ಡಮರು, ಡೋಲು, ಕೊಂಬು, ಚರ್ಮ ವಾದ್ಯ, ತಾಸೆ, ಸೂರ್ಯ ವಾದ್ಯ, ನಾಗಸ್ವರ, ಡೋಲಕ್ ನೊಂದಿಗೆ ಚಂಡೆ, ಸ್ಯಾಕ್ಸೋಫೋನ್ ವಾದನ ನಡೆಯುತ್ತದೆ. ಈ ವೇಳೆ ಭಾಗವತರು ಪುರಂದರ, ಕನಕ, ಮೊದಲಾದ ದಾಸವರೇಣ್ಯರ ಹಾಡುಗಳನ್ನು ಉದಯರಾಗದೊಂದಿಗೆ ಹಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀಪಾದರು ಸೂರ್ಯೋದಯಕ್ಕೆ ಮೊದಲು ಪ್ರಾರ್ಥನೆ ಮಾಡಿ ಕೂರ್ಮಾರತಿಯನ್ನು ಹೊರಗಿನ ಒಂದು ಸುತ್ತು ತಂದು ಶ್ರೀ ಕೃಷ್ಣ ದೇವರಿಗೆ ಬೆಳಗಿದರು. ಬಳಿಕ ಲಕ್ಷ್ಮೀ ಸನ್ನಿಧಾನವಿರುವ ತುಳಸಿ, ಮುಖ್ಯಪ್ರಾಣ, ಮಧ್ವಾಚಾರ್ಯರು, ಹಾಗು ಗರುಡ ದೇವರಿಗೆ ಬೆಳಗಿದರು. ಅನಂತರ ಕಲಾವಿದರು ವಾದ್ಯ ವಾದನವನ್ನು ಜಂಪೆ, ರೂಪಕ, ತ್ರಿಪುಟ, ಆದಿ, ಸಂಕೀರ್ಣ, ತಾಳದೊಂದಿಗೆ ನುಡಿಸುತ್ತಾ ಐದು ಸುತ್ತು ಬರುತ್ತಾರೆ. ಇದೇ ವೇಳೆಗೆ ಭಾಗವತರು ಹಾಡುಗಳನ್ನು ಹಾಡುತ್ತಿರುತ್ತಾರೆ.


ವಿದ್ಯುತ್ ಬೆಳಕಿನ ಬದಲು ಸುತ್ತಲೂ ಹಚ್ಚಿರುವ  ಹಣತೆಗಳ ಬೆಳಕು ನಯನ ಮನೋಹರವಾಗಿ ಕಾಣಿಸುತ್ತದೆ. ವಿವಿಧ ಬಗೆಯ ವಾದ್ಯಪ್ರಕಾರಗಳು, ಹಾಡುಗಳು, ಹಣತೆ ಬೆಳಕಿನ ಸಂಯೋಜನೆ ಈ ಒಂದು ತಿಂಗಳ ಅವಧಿಯಲ್ಲಿ ಶ್ರೀ ಕೃಷ್ಣ ಮಠದಲ್ಲಿ ನೋಡಲು ಸಿಗುತ್ತದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top