ಜನಾರ್ದನ್​ ಕೊಡವೂರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ

Upayuktha
0


ಉಡುಪಿ: ವಾಲ್ಮೀಕಿ ನಾಡು ಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​ ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ​ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​ 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.​ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ ಅಧ್ಯಕ್ಷತೆ ವಹಿಸಿದ್ದರು. ​ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅಭಿನಂದನಾ ಮಾತುಗಳನ್ನಾಡಿದರು.  


ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ​ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​.ಪಿ., ಗ್ರಾಮೀಣ ಬ್ಯಾಂಕ್​ ಹಿರಿಯ ವ್ಯವಸ್ಥಾಪಕ ಕೆ. ರಾ​ಘವೇಂದ್ರ ಉಪಾಧ್ಯಾಯ, ಜಿಲ್ಲಾ ಕನಕದಾಸ ಸೇವಾ ಸಂ​ಘದ  ನಿಕಟಪೂರ್ವ ಅಧ್ಯಕ್ಷ ಹನುಮಂತ ಆಡಿನ​, ಮಹರ್ಷಿ ವಾಲ್ಮೀಕಿ​ ಸಂಘದ ಗೋಪಾಲ್​ ದೇವದುರ್ಗ​,​ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ಪದ್ಮಾಸಿನಿ, ವಸಂತ್, ದೀಪಾ ಕರ್ಕಿ ಉಪಸ್ಥಿತರಿದ್ದರು. 


ಸಾಹಿತಿ ಡಾ. ನಿಕೇತನ ಉಪನ್ಯಾಸ ನೀಡಿದರು. ವಾಲ್ಮೀಕಿ ಸಂದ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿದರು. ರಾ​ಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ರಾಜೇಶ್​ ಭಟ್​ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top