ಅಲೋಶಿಯಸ್ ವಿವಿಯ ಗ್ರಂಥಪಾಲಕ ಉದಯರವರಿಗೆ PhD ಪದವಿ

Upayuktha
0



ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಗ್ರಂಥಪಾಲಕರಾಗಿರುವ ಉದಯ ಅವರ  'ಮಂಗಳೂರು ಮತ್ತು ಮೈಸೂರು ಪ್ರದೇಶಗಳಲ್ಲಿ ಕಾಲೇಜು ಗ್ರಂಥಾಲಯಗಳ ಅಭಿವೃದ್ಧಿಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಪಾತ್ರ: ಒಂದು ಅಧ್ಯಯನ' ('Role of University Grants Commission in the Development of College Libraries in the Mangalore and Mysore Regions: A Study') ಎಂಬ ಸಂಶೋಧನಾ ಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. 


ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಮತ್ತು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮಾಜಿ ಅಧ್ಯಕ್ಷ ಡಾ. ಖೈಸರ್ ಮುನೀಬುಲ್ಲಾ ಖಾನ್ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನೆಯನ್ನು ಮಂಡಿಸಿದ್ದರು. 


ಉದಯ ಅವರು ಉಡುಪಿ ಜಿಲ್ಲೆಯ ಬೈಂದೂರಿನ ಗಂಗನಾಡು, ತೊಗ್ತಿಯ ವೆಂಕ ಮತ್ತು ಗುಲಾಬಿ ದಂಪತಿಯ ಪುತ್ರ. 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top