ರಕ್ತದಾನ ಮಾಡುವುದು ಅತ್ಯಂತ ಪವಿತ್ರಕಾರ್ಯ: ಆಂಟೋನಿ ಡಿಸೋಜಾ

Upayuktha
0


ಮಂಗಳೂರು: ರಕ್ತದಾನ ಮಾಡುವುದು ಅತ್ಯಂತ ಪವಿತ್ರವಾದ ಕಾರ್ಯ. ರಕ್ತದಾನ ಮಾಡುವುದರಿಂದ ಸಾಕಷ್ಟು ಜೀವಗಳನ್ನು ಉಳಿಸಲು ಸಾಧ್ಯವಿದೆ. ಹಾಗಾಗಿ ಹೆಚ್ಚಿನ ಜನರು ರಕ್ತದಾನ ಮಾಡಲು ಮುಂದಾಗಿ ಎಂದು ಜಿಲ್ಲಾ ವೆನ್ಲಾಕ್‍ ಆಸ್ಪತ್ರೆಯ ರಕ್ತನಿಧಿ ಘಟಕದ ಉಸ್ತುವಾರಿ ಆಂಟೋನಿ ಡಿಸೋಜಾ ತಿಳಿಸಿದರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಯುವರೆಡ್‍ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ, ಯುವರೆಡ್‍ಕ್ರಾಸ್ ವಿಶ್ವವಿದ್ಯಾನಿಲಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಲಯನ್ಸ್‍ಕ್ಲಬ್, ಶ್ರೀ ಸಾಯಿ ಆಶ್ರಯ, ಸಾಯಿ ಶಕ್ತಿ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಹಾಗೂ ಭಾರತೀಯ ರೆಡ್‍ಕ್ರಾಸ್‍ರಕ್ತ ನಿಧಿ, ವೆನ್ಲಾಕ್‍ಜಿಲ್ಲಾಆಸ್ಪತ್ರೆ ರಕ್ತನಿಧಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಒಬ್ಬ ವ್ಯಕ್ತಿತನ್ನಜೀವಿತಾವಧಿಯಲ್ಲಿಎಷ್ಟು ಬಾರಿಯಾದ್ರೂ ರಕ್ತದಾನ ಮಾಡಲು ಸಾಧ್ಯವಿದೆ. ರಕ್ತವನ್ನು ದಾನವಾಗಿ ಪಡೆದ ಕೂಡಲೇ ಸಾಕಷ್ಟು ಪರೀಕ್ಷೆಗಳಿಗೆ ಒಳಪಡಿಸಿ ಸಂಸ್ಕರಿಸಲಾಗುವುದು. ಹಾಗಾಗಿ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದುರಕ್ತದಾನದ ಕುರಿತು ಜಾಗೃತಿ ಮೂಡಿಸಿದರು. 


ಸಾಯಿ ಆಶ್ರಯದ ಎಸ್ ಡಿ ಎಂಸಿ ವ್ಯವಸ್ಥಾಪಕ ಟ್ರಸ್ಟಿ ವಿಶ್ವಾಸ್‍ರಾವ್‍ಯು. ಎಸ್., ರಕ್ತದಾನ ಮಾಡಲು ಆಸಕ್ತಿ ಇದ್ದರೂ ಬಹುತೇಕ ಸಂದರ್ಭಗಳಲ್ಲಿ ಒತ್ತಡದ ಕಾರಣದಿಂದಾಗಿ ರಕ್ತದಾನ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಈ ಶಿಬಿರದ ಮೂಲಕ ಸಾಕಷ್ಟು ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಶ್ಲಾಘನೀಯ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡ ಎಸ್., ಈ ಕಾಲೇಜು ಕೇವಲ ವಿದ್ಯಾಭ್ಯಾಸಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಸಮಾಜಮುಖಿ ಕೆಲಸಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಾಗದೇ ಇರುವುದರಿಂದ ಕಲಬೆರಕೆಗೆ ಅವಕಾಶವಿಲ್ಲ ಎಂದು ಅಭಿಪ್ರಾಯ ಪಟ್ಟರು. 


ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ದಯಾನಂದ ನಾಯಕ್, ಸಾಯಿ ಶಕ್ತಿ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷೆ ಲಯನ್‍ಜ್ಯೋತಿಚಂದ್ರ, ಲಯನ್ಸ್‍ಕ್ಲಬ್‍ ಅಧ್ಯಕ್ಷ ಲಯನ್‍ರಿಯಾಜ್ ಎಂ. ಎ. ರಕ್ಸಿದಿ, ರೆಡ್‍ಕ್ರಾಸ್‍ಕಾರ್ಯಕ್ರಮ ಅಧಿಕಾರಿ ಡಾ. ಭಾರತಿ ಪಿಲಾರ್, ಎನ್‍ಎಸ್‍ಎಸ್‍ ಅಧಿಕಾರಿ ಭವ್ಯ, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‍ಕ್ರಾಸ್ ನೋಡಲ್‍ ಅಧಿಕಾರಿ ಡಾ. ಗಾಯತ್ರಿ ಎನ್. ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top