ಅಂತರ್ ವಲಯ ವಾಲಿಬಾಲ್ ಪಂದ್ಯಾವಳಿ ; ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

Upayuktha
0



ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆದು, ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು.


ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್‌ನ ಮಂಜುನಾಥ್ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top