ಮೂಡುಬಿದಿರೆ: ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ 11 ಚಿನ್ನ, 07 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು.
ಫಲಿತಾಂಶ :
ಪುರುಷರ ವಿಭಾಗದಲ್ಲಿ : ದೇವರಾಜು – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ನಿಖಿಲ್ – 65 ಕೆಜಿ ವಿಭಾಗದಲ್ಲಿ (ಪ್ರಥಮ), ರಾಕೇಶ್ - 70 ಕೆಜಿ ವಿಭಾಗದಲ್ಲಿ (ಪ್ರಥಮ), ಗುಡ್ಡಪ್ಪ - 74 ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು - 79 ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ – 86 ಕೆಜಿ ವಿಭಾಗದಲ್ಲಿ (ದ್ವಿತೀಯ), ರೇವಣ್ ಕುಮಾರ್ - 86 ಕೆಜಿ ವಿಭಾಗದಲ್ಲಿ (ತೃತೀಯ), ಪ್ರಜ್ವಲ್ - 92 ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ - 97 ಕೆಜಿ ವಿಭಾಗದಲ್ಲಿ (ಪ್ರಥಮ), ರಕ್ಷಿತ್ ರಾವ್ – 97+ ಕೆಜಿ ವಿಭಾಗದಲ್ಲಿ (ಪ್ರಥಮ) ಸ್ಥಾನ ಪಡೆದರು.
ಮಹಿಳೆಯರ ವಿಭಾಗದಲ್ಲಿ : ತ್ರಿವೇಣಿ – 50 ಕೆಜಿ ವಿಭಾಗದಲ್ಲಿ (ದ್ವಿತೀಯ), ಚಂದ್ರಿಕಾ – 53 ಕೆಜಿ ವಿಭಾಗದಲ್ಲಿ (ಪ್ರಥಮ), ಶಾಮಲಾ – 55 ಕೆಜಿ ವಿಭಾಗದಲ್ಲಿ (ಪ್ರಥಮ), ಗ್ರೀಷ್ಮಾ – 57 ಕೆಜಿ ವಿಭಾಗದಲ್ಲಿ (ಪ್ರಥಮ), ಚೈತ್ರಾ - 59 ಕೆಜಿ ವಿಭಾಗದಲ್ಲಿ (ಪ್ರಥಮ), ಮನ್ವಿತಾ - 62 ಕೆಜಿ ವಿಭಾಗದಲ್ಲಿ (ದ್ವಿತೀಯ), ಮೃದುಲಾ – 65 ಕೆಜಿ ವಿಭಾಗದಲ್ಲಿ (ದ್ವಿತೀಯ), ಮಾನ್ಯ - 68 ಕೆಜಿ ವಿಭಾಗದಲ್ಲಿ (ದ್ವಿತೀಯ), ಪ್ರಣ್ವಿಕಾ - 72 ಕೆಜಿ ವಿಭಾಗದಲ್ಲಿ (ದ್ವಿತೀಯ), ಮಲ್ಲಮ್ಮ - 76 ಕೆಜಿ ವಿಭಾಗದಲ್ಲಿ (ತೃತೀಯ) ಸ್ಥಾನ ಗಳಿಸಿದರು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ